AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

ಮೂವರು ಶಿಕ್ಷಕರು ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ ಅಚಾತುರ್ಯವೆಸಗಿದ್ದಾರೆ.

ತಮಿಳುನಾಡು: ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ
ವಿದ್ಯಾರ್ಥಿನಿ-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
| Edited By: |

Updated on:Jul 06, 2026 | 10:53 AM

Share

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ ಅಚಾತುರ್ಯವೆಸಗಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.

ಮತ್ತಷ್ಟು ಓದಿ: ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!

ಮುಖ್ಯೋಪಾಧ್ಯಾಯರು ತಕ್ಷಣವೇ ಪೊಲೀಸ್ ದೂರು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ವರದಿ ಮಾಡುವಂತೆ ಸೂಚಿಸಿದರು. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ತಂಡ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಅವರು ಈಗ 15 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಕೃಷ್ಣಗಿರಿ ಜಿಲ್ಲೆಯ ಪೋಚಂಪಲ್ಲಿ ಬಳಿಯ ಸರ್ಕಾರಿ ಶಾಲೆಯಲ್ಲಿ 13 ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಆರುಮುಗಂ, ಪ್ರಕಾಶ್ ಮತ್ತು ಚಿನ್ನಸ್ವಾಮಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳು ಬಂದ ನಂತರ ಈ ಮೂವರು ಶಿಕ್ಷಕರನ್ನು ವಜಾಗೊಳಿಸಲಾಗಿದೆ. ಅವರ ವಿರುದ್ಧ ತನಿಖೆಗೂ ಆದೇಶಿಸಲಾಗಿದೆ.

ಪೊಲೀಸರು ಮೂವರು ವ್ಯಕ್ತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ಮೂವರನ್ನೂ ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ತೀವ್ರ ಆಘಾತ ಉಂಟುಮಾಡಿರುವ ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಸುಳ್ಳು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಈ ಬಗ್ಗೆ ಮಾತನಾಡಿದ ಕೃಷ್ಣಗಿರಿ ಜಿಲ್ಲಾಧಿಕಾರಿ ದಿನೇಶ್ ಕುಮಾರ್, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಆದರೆ ಬಾಲಕಿಗೆ ಗರ್ಭಪಾತವಾಗಿದೆ ಹೀಗಾಗಿ ಶಾಲೆಗೆ ಹೋಗಿತ್ತಿಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಕೃಷ್ಣಗಿರಿ ಶಾಲಾ ಘಟನೆ ಬೆಳಕಿಗೆ ಬರುತ್ತಿದ್ದಂತೆ, ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಎಐಎಡಿಎಂಕೆ ಒತ್ತಾಯಿಸಿದೆ.

Published On - 8:07 am, Thu, 6 February 25

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್