ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ

fake Bengaluru police account on X; ಏಪ್ರಿಲ್ 28ರಂದು ಸಿಸಿಬಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಜತೆಗೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಲಭ್ಯವಿರುವ ತಂತ್ರಜ್ಞಾನಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಮಾಗೇಶ್ ಕುಮಾರ್​ನನ್ನು ಚೆಟ್ಟುಪಟ್ಟುವಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Ganapathi Sharma

Updated on:Aug 23, 2023 | 9:17 PM

ಬೆಂಗಳೂರು, ಆಗಸ್ಟ್ 23: ಬೆಂಗಳೂರು ಪೊಲೀಸ್ (Bengaluru Police) ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಟ್ವಿಟರ್​ನಲ್ಲಿ (ಎಕ್ಸ್) ನಕಲಿ ಖಾತೆಯನ್ನು ಸೃಷ್ಟಿಸಿದ್ದ ತಮಿಳುನಾಡು (Tamilu Nadu) ಮೂಲದ ವ್ಯಕ್ತಿ ಮಾಗೇಶ್ ಕುಮಾರ್ ಎಂಬಾತನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರು ಪೊಲೀಸ್ ಇಲಾಖೆಯು ಟ್ವಿಟರ್​ನಲ್ಲಿ @BlrCityPolice ಎಂಬ ಹೆಸರಿನ ಖಾತೆಯನ್ನು ಹೊಂದಿದೆ. ಅದೇ ಮಾದರಿಯಲ್ಲಿ ಆರೋಪಿ ಮಾಗೇಶ್ ಕುಮಾರ್ ಟ್ವಿಟರ್ ನಲ್ಲಿ @BlrCityPolicee ಎಂಬ ನಕಲಿ ಖಾತೆಯನ್ನು ಸೃಷ್ಟಿಸಿದ್ದನು. ಈ ಅಪರಾಧದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ದಳ (CCB) ಮಾಹಿತಿ ನೀಡಿದೆ. ಪೊಲೀಸ್ ಹೆಸರನ್ನು ದುರುಪಯೋಗ ಪಡಿಸಿಕೊಳ್ಳಲು ಹಾಗೂ ಪೊಲೀಸ್ ಇಲಾಖೆಯ ಹೆಸರಿಗೆ ಮಸಿಬಳಿಯುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಕುರಿತು ಏಪ್ರಿಲ್ 28ರಂದು ಸಿಸಿಬಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಜತೆಗೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಲಭ್ಯವಿರುವ ತಂತ್ರಜ್ಞಾನಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಮಾಗೇಶ್ ಕುಮಾರ್​ನನ್ನು ಚೆಟ್ಟುಪಟ್ಟುವಿನಲ್ಲಿ ಬಂಧಿಸಿದ್ದಾರೆ.

ಮಾಗೇಶ್ ಕುಮಾರ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ (ಐಡೆಂಟಿಟಿ ಥೆಫ್ಟ್), ಸೆಕ್ಷನ್ 66ಡಿ (ಕಂಪ್ಯೂಟರ್ ಮಾಹಿತಿಗಳನ್ನು ಬಳಸಿಕೊಂಡು ವ್ಯಕ್ತಿಯನ್ನು ವಂಚಿಸುವುದು) ಹಾಗೂ ಐಪಿಸಿ ಸೆಕ್ಷನ್ 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ದೇಶದಲ್ಲಿ ಸೈಬರ್ ಕ್ರೈಮ್​​ಗೆ ಸಂಬಂಧಪಟ್ಟ ಅಪರಾಧಗಳು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕ್ಯೂ ಆರ್ ಕೋಡ್ ಸಂಬಂಧಿತ ಅಪರಾಧಗಳೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಪೊಲೀಸರೇ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2017 ರಿಂದ ಇಲ್ಲಿಯವರೆಗೆ ಬೆಂಗಳೂರು ನಗರ ಒಂದರಲ್ಲಿಯೇ 50,000 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 20662 ಪ್ರಕರಣಗಳು ಕ್ಯೂ ಆರ್ ಕೋಡ್ ಗೆ ಸಂಬಂಧಿಸಿದ್ದಾಗಿವೆ. ಸೈಬರ್ ಕೇಸ್ ಗಳಲ್ಲಿ ಶೇ.40ಕ್ಕಿಂತ ಹೆಚ್ಚು ಪ್ರಕರಣಗಳು, ವಂಚಿಸಿ ಹಣ ಪಡೆದುಕೊಳ್ಳು ವ ಉದ್ದೇಶವನ್ನೇ ಹೊಂದಿದ್ದಾಗಿವೆ ಎನ್ನುತ್ತಾರೆ ಪೊಲೀಸರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Wed, 23 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ