ಬೇಲಿಯೇ ಎದ್ದು ಹೊಲ ಮೇಯ್ದಂತೆ; ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಲೈಂಗಿಕ ದೌರ್ಜನ್ಯ
ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಥಮ ದರ್ಜೆ ಪೊಲೀಸ್ ಅಧಿಕಾರಿಯನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಹಾಗೇ, ಅವರನ್ನು ಅಮಾನತುಗೊಳಿಸಲು ಆದೇಶಿಸಲಾಗಿದೆ.

ಚೆನ್ನೈ, ಜನವರಿ 13: ತಮಿಳುನಾಡಿನಲ್ಲಿ (Tamil Nadu) ಪೊಲೀಸ್ ಅಧಿಕಾರಿಯೇ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಕಲ್ಲಕುರಿಚಿ ಜಿಲ್ಲೆಯ 32 ವರ್ಷದ ಮಹಿಳೆಯ ಪತಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದರು. ಆ ಮಹಿಳೆ ಕೆಲವು ಬೇಡಿಕೆಗಳ ಕುರಿತು ಕೆಲವು ಜನರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾಗ, ಅವರು ಉಲುಂದೂರ್ಪೇಟೆ ಬಳಿಯ ಪಲಯಂ ಕುಂಚರಂ ಗ್ರಾಮದ 36 ವರ್ಷದ ಶೇಖ್ ಸಲೀಂ ಎಂಬುವವರನ್ನು ಭೇಟಿಯಾದರು.
ಕಲ್ಲಕುರಿಚಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಪೊಲೀಸ್ ಆಗಿ ಕೆಲಸ ಮಾಡುತ್ತಿದ್ದ ಅವರು ಭದ್ರತಾ ಕೆಲಸಕ್ಕಾಗಿ ಅಲ್ಲಿಗೆ ಬಂದಿದ್ದರು. ಬಳಿಕ ಅವರಿಬ್ಬರೂ ಮೊಬೈಲ್ ಫೋನ್ ನಂಬರ್ ವಿನಿಮಯ ಮಾಡಿಕೊಂಡು ಸ್ನೇಹಿತರಾದರು. ಶೇಖ್ ಸಲೀಂ ಆ ಮಹಿಳೆಯ ಮನೆಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದನ್ನು ನಿರೀಕ್ಷಿಸದ ಮಹಿಳೆ ಕಿರುಚಿದರು. ತಕ್ಷಣ, ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ!
ಬಳಿಕ ಆ ಮಹಿಳೆ ಈ ಸಂಬಂಧ ಕಲ್ಲಕುರಿಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರ ಆಧಾರದ ಮೇಲೆ ಶೇಖ್ ಸಲೀಂ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ಅವರು ಆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟಿದೆ. ಹೀಗಾಗಿ, ಅವರನ್ನು ಬಂಧಿಸಲಾಗಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
