ತಮಿಳುನಾಡು: ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್​ ಮಾಡಿ ಲೈಂಗಿಕ ದೌರ್ಜನ್ಯ

ಯುವತಿಯನ್ನು ಆಟೋದಲ್ಲಿ ಕರೆದೊಯ್ದು ಮೂವರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ತಮಿಳುನಾಡು: ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್​ ಮಾಡಿ ಲೈಂಗಿಕ ದೌರ್ಜನ್ಯ
ಮಹಿಳೆ
Image Credit source: RMIT University

Updated on: Feb 05, 2025 | 9:45 AM

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಅಲ್ಲೇ ಸುತ್ತಮುತ್ತಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ವಿಶೇಷ ತಂಡಗಳನ್ನು ಕೂಡ ರಚಿಸಲಾಗಿದೆ. ಆ ಮೂವರು ಬೇರೊಂದು ಆಟೋದಲ್ಲಿ ಕುಳಿತುಕೊಳ್ಳುವಂತೆ ಹೇಳಿ ಕೊಯಂಬೇಡುವಿನಲ್ಲಿ ಬಿಡಲು ಹೇಳಿದ ಬಳಿಕ ಆಕೆ ಪೊಲೀಸರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ಆ ಆಟೋ ಚಾಲಕ ಚೆನ್ನೈನಲ್ಲಿರುವ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಮಾಡಿದ್ದಾನೆಂದು ಆಕೆ ಹೇಳಿದ್ದಾಳೆ. ಅಪಹರಣಕ್ಕೊಳಗಾಗಿದ್ದಾಗ ಆಟೋದಲ್ಲಿ ಆಕೆಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ನೋಡಿದ್ದ ಜನರು ಕೂಡಲೇ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದರು. ಮಧ್ಯರಾತ್ರಿಯ ಸುಮಾರಿಗೆ ಕೊಯೆಂಬೆಡು ಬಳಿ ಪೊಲೀಸರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಓದಿ: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬಾಳಲ್ಲಿ ಅನುಮಾನದ ಬಿರುಗಾಳಿ, ಪ್ರಿಯಕರನಿಗೆ ಹೇಳಿ ಗಂಡನ ಕೊಲ್ಲಿಸಿದ ಪತ್ನಿ!

ಸೇಲಂನಲ್ಲಿ ಮನೆಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು, ಮಾಧವರಂನಲ್ಲಿರುವ ತನ್ನ ಸಂಬಂಧಿಯನ್ನು ಭೇಟಿ ಮಾಡಲು ಚೆನ್ನೈಗೆ ಬಂದಿದ್ದಳು. ಕಿಲಂಬಕ್ಕಂನಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬಸ್ಸಿನಿಂದ ಇಳಿದು ಮಾಧವರಂಗೆ ಹೋಗುವ ಬಸ್ ಹತ್ತಲು ಕಾಯುತ್ತಿದ್ದಳು. ಬಸ್ ಸಿಗದಿದ್ದಾಗ, ಟರ್ಮಿನಸ್‌ನಿಂದ ಹೊರಬಂದ ಆಕೆಗೆ ಡ್ರಾಪ್ ಕೊಡುವುದಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಸ್ತುತ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us