Shivamogga News: ಶಿವಮೊಗ್ಗದಲ್ಲಿ ಟ್ಯಾಕ್ಸಿ ಚಾಲಕ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2023 | 9:00 AM

ಶಿವಮೊಗ್ಗದಲ್ಲಿ ಟ್ಯಾಕ್ಸಿ ಓಡಿಸಿಕೊಂಡಿದ್ದ ವ್ಯಕ್ತಿಯೊರ್ವ ನಿನ್ನೆ ರಾತ್ರಿ ಮನೆಗೆ ಬಂದು ಊಟ ಮಾಡಿ ರೂಮಿನೊಳಗೆ ಹೋಗಿದ್ದವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Shivamogga News: ಶಿವಮೊಗ್ಗದಲ್ಲಿ ಟ್ಯಾಕ್ಸಿ ಚಾಲಕ ಆತ್ಮಹತ್ಯೆ
ಶಿವಮೊಗ್ಗದಲ್ಲಿ ಟ್ಯಾಕ್ಸಿ ಚಾಲಕ ಆತ್ಮಹತ್ಯೆ
Follow us on

ಶಿವಮೊಗ್ಗ, ಆ.1: ರಾತ್ರಿ ಮನೆಗೆ ಬಂದ ಟ್ಯಾಕ್ಸಿ ಚಾಲಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ (Shivamogga)ದ ವಿನೋಬನಗರ ಬಡಾವಣೆಯ 2 ನೇ ಹಂತದಲ್ಲಿ ನಡೆದಿದೆ. ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ. ಇತ ಟೂರಿಸ್ಟ್ ಟ್ಯಾಕ್ಸಿ ಚಾಲನೆ ಮಾಡಿಕೊಂಡಿದ್ದ. ನಿನ್ನೆ (ಜು.31) ರಾತ್ರಿ ಮನೆಗೆ ಬಂದು ಊಟ ಮಾಡಿ ರೂಮಿನೊಳಗೆ ಹೋಗಿದ್ದ. ಮುಂಜಾನೆ ಕೊಠಡಿಯಲ್ಲಿ ದೀಪ ಉರಿಯುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತನ ಹೊಲದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನ ಕತ್ತರಿಸಿ ಮಾರಾಟ; ಆರೋಪಿಗಳ ಬಂಧನ

ಬೀದರ್​: ರೈತನ ಹೊಲದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನ ಅನಧಿಕೃತವಾಗಿ ಕತ್ತರಿಸಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಜಾಲವೊಂದನ್ನ ಭೇದಿಸುವಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹೌದು, ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಭಾಲ್ಕಿ ತಾಲೂಕಿನ ತಳವಾಡ ಕೆ ಬಳಿ ದಾಳಿ ಮಾಡಿ 3 ಜನರನ್ನ ಬಂಧಿಸಿದ್ದು, 6 ಜನರು ಪರಾರಿಯಾಗಿದ್ದಾರೆ. ಇನ್ನು ದಾಳಿ ವೇಳೆ ಸುಮಾರು 3 ಲಕ್ಷ ಮೌಲ್ಯದ 60 ಕೆಜಿ. ಶ್ರೀಗಂಧ ಕಟ್ಟಿಗೆ ತುಂಡುಗಳನ್ನ ವಶಕ್ಕೆ ಪಡೆದಿದ್ದು, ಇದರ ಜೊತೆಗೆ ಶ್ರೀಗಂಧ ಸಾಗಿಸುತ್ತಿದ್ದ ಒಂದು ಕಾರು, 5 ಮೊಬೈಲ್, ಶ್ರೀಗಂಧ ಕತ್ತರಿಸುವ ಯಂತ್ರವನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಪ್ರೇಮ ವೈಫಲ್ಯ, ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ವಿಟಿಯು ಕಾರು ಚಾಲಕ ನೇಣಿಗೆ ಶರಣು

ಇನ್ನು ಈ ಪ್ರಕರಣ ಪತ್ತೆಯಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳ ಕರ್ತವ್ಯಕ್ಕೆ ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ವಾನತಿ ಅವರು ನಗದು ಬಹುಮಾನ ಘೋಷಿಸಿದ್ದಾರೆ. ಈ ಶ್ರೀಗಂಧದ ಕಳ್ಳತನ ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಇಂತಹ ಪ್ರಕರಣದಲ್ಲಿ ಭಾಗಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡುಕೊಳ್ಳುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ