ಆಗ್ರಾ: ಕೋಚಿಂಗ್​ ಸೆಂಟರ್ ಎದುರು ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿಗಳು

ಗುರುವನ್ನು ದೇವರಂತೆ ಕಾಣಬೇಕು ಎಂಬುದನ್ನು ಪ್ರತಿಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಹೇಳಿಕೊಡುತ್ತಾರೆ. ಮಕ್ಕಳಿಗೆ ಪೋಷಕರ ಮಾತಿಗಿಂತಲೂ ಶಿಕ್ಷಕರು ಹೇಳಿದ್ದಾರೆಂದರೆ ಚಾಚೂ ತಪ್ಪದೆ ಆ ಕೆಲಸವನ್ನು ಮಾಡುತ್ತಾರೆ. ಶಿಕ್ಷಕರ ಮೇಲೆ ಅಷ್ಟು ಗೌರವವಿರುತ್ತದೆ. ಆದರೆ ಆಗ್ರಾದ ಕೋಚಿಂಗ್ ಸೆಂಟರ್​ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ತರಾತುರಿಯಲ್ಲಿ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಗ್ರಾ: ಕೋಚಿಂಗ್​ ಸೆಂಟರ್ ಎದುರು ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿಗಳು
ಶಿಕ್ಷಕ
Follow us
ನಯನಾ ರಾಜೀವ್
|

Updated on: Oct 06, 2023 | 11:10 AM

ಗುರುವನ್ನು ದೇವರಂತೆ ಕಾಣಬೇಕು ಎಂಬುದನ್ನು ಪ್ರತಿಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಹೇಳಿಕೊಡುತ್ತಾರೆ. ಮಕ್ಕಳಿಗೆ ಪೋಷಕರ ಮಾತಿಗಿಂತಲೂ ಶಿಕ್ಷಕರು ಹೇಳಿದ್ದಾರೆಂದರೆ ಚಾಚೂ ತಪ್ಪದೆ ಆ ಕೆಲಸವನ್ನು ಮಾಡುತ್ತಾರೆ. ಶಿಕ್ಷಕರ ಮೇಲೆ ಅಷ್ಟು ಗೌರವವಿರುತ್ತದೆ. ಆದರೆ ಆಗ್ರಾದ ಕೋಚಿಂಗ್ ಸೆಂಟರ್​ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ತರಾತುರಿಯಲ್ಲಿ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದಾದ ನಂತರ ಆರೋಪಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆದರಿಕೆ ಹಾಕುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಗುಂಡು ಹಾರಿಸಿದ್ದೇವೆ ಅಷ್ಟೆ, ಇನ್ನೂ 39 ಬಾಕಿ ಇದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ವಿಡಿಯೋವನ್ನು ಗಮನಿಸಿದ ಆಗ್ರಾ ಪೊಲೀಸರು ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಆಗ್ರಾದ ಖಂಡೌಲಿ ತಹಸಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಾಲುಪುರ ನಿವಾಸಿ ಸುಮಿತ್ ರಾಮಸ್ವರೂಪ್ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಶಾಲೆಯನ್ನು ಮುಗಿಸಿ ಅವರು ಕೋಚಿಂಗ್ ಸೆಂಟರ್​ನಲ್ಲಿ ತರಗತಿ ನಡೆಸುತ್ತಾರೆ. ಇದಕ್ಕಾಗಿ ಖಂದೌಲಿಯಲ್ಲಿಯೇ ಸ್ವಂತ ಕೋಚಿಂಗ್ ಸೆಂಟರ್ ತೆರೆದಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸುಮಿತ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೆಡಿಕಲ್ ಸೀಟ್ ಕೊಡಿಸುವ ಆಮಿಷವೊಡ್ಡಿ ಬೆಂಗಳೂರಿನಲ್ಲಿ ಮೈಸೂರು ವಿದ್ಯಾರ್ಥಿಗೆ ವಂಚನೆ

ಅಷ್ಟರಲ್ಲಿ ಅವರ ಇಬ್ಬರು ಹಳೆ ವಿದ್ಯಾರ್ಥಿಗಳು ಬೈಕ್ ನಲ್ಲಿ ಬಂದಿದ್ದು, ಒಬ್ಬರು ಶಿಕ್ಷಕರನ್ನು ಕರೆದಿದ್ದರು. ಹೊರಗೆ ಬಂದ ತಕ್ಷಣ ವಿದ್ಯಾರ್ಥಿಯೊಬ್ಬ ಬಂದೂಕು ತೆಗೆದು ಶಿಕ್ಷಕರ ಕಾಲಿಗೆ ಗುಂಡು ಹಾರಿಸಿದ. ಗುಂಡು ಅವರ ಕಾಲನ್ನು ತೂರಿಕೊಂಡು ಹೊರಬಂದಿತ್ತು. ಗುಂಡಿನ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಆರೋಪಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ ಇಬ್ಬರೂ ವಿದ್ಯಾರ್ಥಿಗಳು ಅಪ್ರಾಪ್ತರು. ಸದ್ಯ ಅವರಿಗಾಗಿ ಶೋಧ ನಡೆಸಲಾಗುತ್ತಿದೆ.

ಆರೋಪಿ ವಿದ್ಯಾರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿದ್ಯಾರ್ಥಿಗಳು ಈ ಬೆದರಿಕೆಯ ವಿಡಿಯೋವನ್ನು ತಮ್ಮ ಖಾತೆಯಿಂದ ವೈರಲ್ ಮಾಡಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್