Crime News: ಪಡಿತರ ಅಕ್ಕಿ ಅಕ್ರಮ ಸಾಗಣೆ, ಶಿಕ್ಷಕ ಆತ್ಮಹತ್ಯೆ, ಲಿಂಗಸುಗೂರು ಬಳಿ ಅಪಘಾತ, ಇಂಡಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಡೆತ್‌ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕನ ಶವವು ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕು ಬೆಳ್ಳುಬ್ಬಿ ಗ್ರಾಮದ ಕೃಷ್ಣಾ ನದಿ ತಟದಲ್ಲಿ ಪತ್ತೆಯಾಗಿದೆ.

Crime News: ಪಡಿತರ ಅಕ್ಕಿ ಅಕ್ರಮ ಸಾಗಣೆ, ಶಿಕ್ಷಕ ಆತ್ಮಹತ್ಯೆ, ಲಿಂಗಸುಗೂರು ಬಳಿ ಅಪಘಾತ, ಇಂಡಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 26, 2021 | 8:35 PM

ಯಾದಗಿರಿ: ಅಕ್ರಮವಾಗಿ ಸಾಗಿಸುತ್ತಿದ್ದ 983 ಕ್ವಿಂಟಲ್​ ಪಡಿತರ ಅಕ್ಕಿಯನ್ನು ಜಿಲ್ಲೆಯ ಶಹಾಪುರ ತಾಲ್ಲೂಕಿನ ಭಿಮರಾಯನಗುಡಿ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1966 ಅಕ್ಕಿ ಚೀಲವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುಮಠಕಲ್​ನಿಂದ‌ 3 ಲಾರಿಗಳಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು. ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಗಳ ಮೇಲೆ ಪೊಲೀಸರು ದಾಳಿ ನಡೆಸಿದರು. ವಶಪಡಿಸಿಕೊಂಡಿರುವ ಅಕ್ಕಿಯು ಸುಮಾರು ₹ 21.62 ಲಕ್ಷ ಬೆಲೆ ಬಾಳುತ್ತಿತ್ತು ಎಂದು ಅಂದಾಜಿಸಲಾಗಿದೆ. ಭೀಮರಾಯನಗುಡಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್​ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕನ ಶವ ಪತ್ತೆ ಡೆತ್‌ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕನ ಶವವು ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕು ಬೆಳ್ಳುಬ್ಬಿ ಗ್ರಾಮದ ಕೃಷ್ಣಾ ನದಿ ತಟದಲ್ಲಿ ಪತ್ತೆಯಾಗಿದೆ. ಮೃತರನ್ನು ಶಿಕ್ಷಕ ಬಾಳಪ್ಪ ದಳವಾಯಿ ಎಂದು ಗುರುತಿಸಲಾಗಿದೆ. ಕೊಲ್ಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಾಳಪ್ಪ ದಳವಾಯಿ ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್ ಬರೆದಿಟ್ಟಿದ್ದರು. ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಕ ವೃದ್ಧಂಕ್ಕೂ ಸ್ನೇಹಿತರಿಗೂ ಕೋಟಿ ವಂದನೆಗಳು. ನನಗೆ ಬರೋ ಸೌಲಭ್ಯಗಳನ್ನು ಒದಗಿಸಿಕೊಡಿ. ನನ್ನ ಮಕ್ಕಳಿಗೂ ಪತ್ನಿಗೂ ಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.

ಅಪಘಾತ: ಮೂವರಿಗೆ ಗಾಯ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹೊಸೂರು ಕ್ರಾಸ್ ಬಳಿ ಕ್ರೂಸ್ ಮತ್ತು ಬೈಕ್​ ಮಧ್ಯೆ ಡಿಕ್ಕಿ ಸಂಭವಿಸಿದ್ದು ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಹಳ್ಳಿಗಳಿಗೆ ಸಮರ್ಪಕ ಬಸ್​ ಒದಗಿಸಲು ಆಗ್ರಹ ಹಳ್ಳಿಗಳಿಗೆ ಸಮರ್ಪಕವಾಗಿ ಸಾರಿಗೆ ಬಸ್​ ಒದಗಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದ ಸಮೀಪ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಸರಿಯಾದ ಸಮಯಕ್ಕೆ ಸಾರಿಗೆ ಬಸ್​ ಸಂಚಾರ ಆರಂಭಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಇಂಡಿ ಪೊಲೀಸರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಇಂಡಿ-ಸಿಂದಗಿ ಪಟ್ಟಣಗಳ ಸಂಪರ್ಕ ರಸ್ತೆ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರಿಯಾದ ಸಮಯಕ್ಕೆ ಬಸ್ ಸಂಚರಿಸುತ್ತಿಲ್ಲ. ಹೀಗಾಗಿ ರೂಢಗಿ, ಖೇಡಗಿ, ಲಾಳಸಂಗಿ, ಸಾತಲಗಾಂವ್, ಸಾಲೋಟಗಿ ಗ್ರಾಮಗಳಲ್ಲಿ ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಲವತ್ತುಕೊಂಡರು.

ಇದನ್ನೂ ಓದಿ: ಬಾಗಲಕೋಟೆ: 2012ರಲ್ಲಿ ನಡೆದ ಕೊಲೆ ಪ್ರಕರಣದ 7 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಇದನ್ನೂ ಓದಿ: ಮಳೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಸ್ವಯಂಕೃತ ಅಪರಾಧವೇ ಕಾರಣ: ವಿಶೇಷ ಆಯುಕ್ತ ದಯಾನಂದ

Published On - 8:34 pm, Fri, 26 November 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ