ಬೈದರೆಂದು ತಂದೆಗೆ ಸುತ್ತಿಗೆಯಿಂದ ಹೊಡೆದು ತಾನು ಆತ್ಮಹತ್ಯೆಗೆ ಯತ್ನಿಸಿದ ಮಗ

ಬೈದರೆಂದು ಮಗನೊಬ್ಬ ತಂದೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ತಿರುವನಂತಪುರಂನಲ್ಲಿ ಘಟನೆ ನಡೆದಿದೆ, ತಂದೆ ಮಗನ ಮೇಲೆ ಕೋಪದಿಂದ ನಾಲ್ಕು ಮಾತನಾಡಿದ್ದಾರೆ, ಅದಕ್ಕೆ ಕೋಪಗೊಂಡ ಬಾಲಕ ತಂದೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ.

ಬೈದರೆಂದು ತಂದೆಗೆ ಸುತ್ತಿಗೆಯಿಂದ ಹೊಡೆದು ತಾನು ಆತ್ಮಹತ್ಯೆಗೆ ಯತ್ನಿಸಿದ ಮಗ
ಸುತ್ತಿಗೆ

Updated on: Aug 28, 2023 | 2:18 PM

ಬೈದರೆಂದು ಮಗನೊಬ್ಬ ತಂದೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ತಿರುವನಂತಪುರಂನಲ್ಲಿ ಘಟನೆ ನಡೆದಿದೆ, ತಂದೆ ಮಗನ ಮೇಲೆ ಕೋಪದಿಂದ ನಾಲ್ಕು ಮಾತನಾಡಿದ್ದಾರೆ, ಅದಕ್ಕೆ ಕೋಪಗೊಂಡ ಬಾಲಕ ತಂದೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ.

ತಿರುವನಂತಪುರಂನ ಪೋತೆನ್‌ಕೋಡ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ಯಾವುದೋ ಕಾರಣಕ್ಕೆ ತಂದೆ ಗದರಿಸಿದ್ದರಿಂದ ಬಾಲಕ ಕುಪಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ತಂದೆ ಅಲ್ಲಿಂದ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಓಡಿಬಂದಿದ್ದಾರೆ, ಬಾಲಕ ಕೋಣೆಯೊಳಗೆ ನೇಣುಬಿಗಿದುಕೊಳ್ಳಲು ಯತ್ನಿಸಿದ್ದು, ಸ್ಥಳೀಯರು ರಕ್ಷಿಸಿದ್ದಾರೆ.

ಇಬ್ಬರೂ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಇಂಥದ್ದೇ ಘಟನೆಯೊಂದು ನಡೆದಿತ್ತು. ಮೊಬೈಲ್​ನಿಂದ ಯಾರಿಗೋ ತಾಯಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಅನುಮಾನ ಪಟ್ಟ ಬಾಲಕ ಕೊಡಲಿಯಿಂದ ತಾಯಿಯನ್ನು ಹತ್ಯೆ ಮಾಡಿದ್ದಾನೆ.

ಮತ್ತಷ್ಟು ಓದಿ: ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ

ವಸಾಯಿ ಟೌನ್‌ಶಿಪ್‌ನ ಪರೋಲ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನಿಗೆ ತನ್ನ ತಾಯಿ ಸೋನಾಲಿ ಗೊಗ್ರಾ (35) ಬಗ್ಗೆ ಅನುಮಾನವಿತ್ತು ಮತ್ತು ಇಬ್ಬರೂ ಆಗಾಗ ಜಗಳವಾಡುತ್ತಿದ್ದರು ಎಂದು ಮಾಂಡವಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕಾಂಬಳೆ ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us