ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಲವ್, ಸೆಕ್ಸ್, ದೋಖಾಗೆ ಅಪ್ರಾಪ್ತ ಯುವತಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Nov 28, 2024 | 9:42 PM

ಮಂಗಳೂರು, ನವೆಂಬರ್​ 28: ಆಕೆ 17 ವರ್ಷದ ಅಪ್ರಾಪ್ತ ಯುವತಿ (girl). ಹದಿಹರೆಯದ ವಯಸ್ಸಿನಲ್ಲಿ ನನಗೂ ಒಬ್ಬ ಗೆಳೆಯ ಬೇಕು ಅಂತಾ ಅವಳಿಗೂ ಅನ್ನಿಸಿತ್ತು. ಮೊಬೈಲ್ ಮೂಲಕ ಕೆಲವೇ ತಿಂಗಳ ಪರಿಚಯವಾಗಿದ್ದ ಯುವಕನ ಜೊತೆ ಪ್ರೇಮದ ಬಲೆಗೆ ಬಿದ್ದಿದ್ದ ಯುವತಿ ಇದೀಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಯುವಕನ ಮೋಸಕ್ಕೆ ಯುವತಿ ಸಾವು

ಈ ಹದಿಹರೆಯದ ವಯಸ್ಸು ಅನ್ನೋದು ತುಂಬಾ ಡೇಂಜರ್. ಈ ವಯಸ್ಸಿನಲ್ಲಿ ಮನಸ್ಸು ಕೇಳೋ ವಿಚಿತ್ರ ಆಸೆ ಕೆಲವೊಮ್ಮೆ ಜೀವನವನ್ನೇ ತೆಗೆದುಬಿಡುತ್ತದೆ. ವಯಸ್ಸಲ್ಲದ ವಯಸ್ಸಿನಲ್ಲಿ ಪ್ರೇಮದ ಪಾಶಕ್ಕೆ ಸಿಲುಕಿದ ಚಿಗುರು ಈಗ ಬಾಡಿ ಹೋಗಿದೆ. ಕೆಲವೇ ತಿಂಗಳೊಳಗೆ ಪರಿಚಯವಾದ ಯುವಕ ತನಗೆ ಮೋಸ ಮಾಡಿದ ಅಂತಾ ಅಪ್ರಾಪ್ತ ಯುವತಿ ಈಗ ಸಾವಿಗೆ ಶರಾಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

ಯುವತಿಗೆ ತನ್ನ ಸಂಬಂಧಿ ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತನ ಜೊತೆಗೆ ಲವ್ ಆಗಿದೆ. ಮೊಬೈಲ್ ಮೂಲಕವೇ ಪ್ರೀತಿಯನ್ನು ಗಟ್ಟಿಗೊಳಿಸಿದ ಯುವತಿ ಮುಂದೆ ಅವನನ್ನೇ ಅರ್ಧಾಂಗಿ ಎಂದು ಸ್ವೀಕರಿಸಿದ್ದಾಳೆ. ಪ್ರವೀಣನೂ ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು, ಊರಿಗೆ ಬಂದಾಗ ಮೀಟ್ ಮಾಡುತ್ತಿದ್ದ. ಕೆಲವೇ ತಿಂಗಳ ಲವ್​ನಲ್ಲಿ ಇವರಿಬ್ಬರ ಬಾಂಧವ್ಯ ಕೂಡ ಗಟ್ಟಿಯಾಗಿತ್ತು. ಕೇವಲ ಎಂಟು ತಿಂಗಳ ಪ್ರೇಮದಲ್ಲಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದರು.

ಈ ಸಂದರ್ಭದಲ್ಲಿ ಯುವತಿಗೆ ಪ್ರವೀಣ ಗರ್ಭ ನಿರೋಧಕ ಮಾತ್ರೆಯನ್ನು ನೀಡಿದ್ದಾನೆ. ಯುವತಿ ಮನೆಯವರು ವಯಸ್ಸು ಪೂರ್ತಿಯಾದಾಗ ಮದುವೆ ಮಾಡಿ ಕೊಡೋದಾಗಿ ಹೇಳಿದ್ದಾರೆ. ಪ್ರೀತಿ ಸಾಗುತ್ತಿದ್ದಾಗ ಪ್ರವೀಣ್​ಗೆ ಯಾಕೋ ಈಕೆಗೆ ಜೊತೆಗಿನ ಸಾಂಗತ್ಯ ಬೋರ್ ಎನಿಸಿದೆ. ದೂರ ಆಗೋಣ ಬ್ರೇಕಪ್ ಅಂತಾ ಹೇಳಿದ್ದಾನೆ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರವೀಣ ಕೈ ಕೊಡುತ್ತಿರೋದನ್ನು ಸಹಿಸಲಾಗದೆ ಯುವತಿ ಇಲಿ ಪಾಶಣ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲಿ ಪಾಶಣ ತೆಗೆದುಕೊಂಡು ಸಾವು

ನವೆಂಬರ್ 20ರಂದು ಇಲಿ ಪಾಶಣವನ್ನು ತೆಗೆದುಕೊಂಡಿದ್ದು, ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿ ನವೆಂಬರ್ 26 ರ ಮಂಗಳವಾರ ಸಾವನ್ನಪ್ಪಿದ್ದಾಳೆ. ಪ್ರವೀಣ್ ಯುವತಿಯ ತಾಯಿ ಬಳಿ ಈ ಹಿಂದೆಯೇ ದೇವರ ಆಣೆ ಹಾಕಿ ಆಕೆಯನ್ನೇ ಮದುವೆಯಾಗೋದಾಗಿ ಹೇಳಿದ್ದಾನೆ. ಪ್ರವೀಣನ ಮಾತನ್ನು ನಂಬಿ ಯುವತಿಯ ತಾಯಿಯೂ ಪ್ರವೀಣನ ಜೊತೆಗೆ ತಿರುಗಾಡೋಕೆ ಅನುಮತಿ ನೀಡಿದ್ದಾರೆ‌. ನವೆಂಬರ್ ಇಪ್ಪತ್ತರ ಮಧ್ಯರಾತ್ರಿ ವಾಂತಿ ಮಾಡಿಕೊಂಡಾಗಲೂ ಯುವತಿ ತಾಯಿಯ ಜೊತೆ ಪ್ರವೀಣನಿಂದ ಆದ ಮೋಸದ ಬಗ್ಗೆ ಹೇಳಿಕೊಂಡಿದ್ದಾಳೆ. ಅಲ್ಲದೇ ಪ್ರವೀಣ್ ತನ್ನನ್ನು ಬಳಸಿಕೊಂಡೊರೋದಾಗಿ ಹೇಳಿದ್ದಾಳೆ. ಇತ್ತ ಯುವತಿ ಸಾವನ್ನಪ್ಪುತ್ತಲೇ ಆರೋಪಿ ಪ್ರವೀಣ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಪುತ್ತೂರಿನಲ್ಲೊಂದು ಅಮಾನವೀಯ ಘಟನೆ: ಮೃತ ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ

ಒಟ್ಟಿನ್ನಲ್ಲಿ ಪಾಪಿ ಪ್ರಿಯತಮ, ಪ್ರೀತಿ ಪ್ರೇಮ ಅಂತಾ ಸುತ್ತಾಡಿ ಯುವತಿಯನ್ನು ಬಳಸಿ ಕೈ‌ಬಿಟ್ಟಿದ್ದಾನೆ. ಪ್ರೀತಿಯೇ ನನ್ನುಸಿರು ಅಂತಾ ಪ್ರೀತಿಯ ಪಾಶಕ್ಕೆ ಸಿಲುಕಿದ ಯುವತಿ ಈಗ ಉಸಿರು ಚೆಲ್ಲಿದ್ದು ದುರಂತ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ