ತೆಲಂಗಾಣ: ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್​ನಲ್ಲಿ ನಡೆದಿದೆ. ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು ಸುಟ್ಟ ಶವವನ್ನು ಗಮನಿಸಿ ಮೊಯಿನಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ತೆಲಂಗಾಣ: ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪೊಲೀಸ್​
Image Credit source: India Today

Updated on: Jan 10, 2024 | 12:16 PM

ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್​ನಲ್ಲಿ ನಡೆದಿದೆ. ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು ಸುಟ್ಟ ಶವವನ್ನು ಗಮನಿಸಿ ಮೊಯಿನಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆರೋಪಿಗಳು ಆಕೆಯನ್ನು ಕೊಲೆ ಮಾಡಿ ಕೃಷಿ ಭೂಮಿಗೆ ತಂದು ಸುಟ್ಟು ಹಾಕಿರಬೇಕು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾವುದೇ ಮಹಿಳೆ ಕಾಣೆಯಾಗಿರುವ ಬಗ್ಗೆ ದೂರು ಬಂದಿದ್ದರೆ ಅದರ ಬಗ್ಗೆ ಮಾಹಿತಿ ನೀಡುವಂತೆ ಹೈದರಾಬಾದ್, ಸೈಬರಾಬಾದ್ ಮತ್ತು ರಾಚಕೊಂಡದಲ್ಲಿ ಮಾಹಿತಿಯನ್ನು ಪ್ರಸಾರ ಮಾಡಿದ್ದೇವೆ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ಪಶ್ಚಿಮ ಬಂಗಾಳದ ಭತ್ತದ ಗದ್ದೆಯಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಭತ್ತದ ಗದ್ದೆಯೊಂದರಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಸಾರ್ವಜನಿಕರ ನಿದ್ದೆಗೆಡಿಸಿತ್ತು. ಮಹಿಳೆಯ ಮುಖಕ್ಕೆ ಆ್ಯಸಿಡ್ ಹಾಕಿ ಸುಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಪೊಲೀಸ್ ಮೂಲಗಳ ಪ್ರಕಾರ ದೇಹದ ಮೇಲೆ ಹಲವೆಡೆ ಇರಿತದ ಗಾಯಗಳಿವೆ. ಅಪರಾಧ ಸ್ಥಳದ ಸುತ್ತಲೂ ಚಾಕುಗಳು, ಆ್ಯಸಿಡ್, ಬಳಸಿದ ಕಾಂಡೋಮ್‌ಗಳು ಮತ್ತು ಸುಟ್ಟ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us