AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Encounter: ಕಾಶ್ಮೀರದ ಆವಂತಿಪೊರಾದಲ್ಲಿ ಮತ್ತೊಂದು ಎನ್​ಕೌಂಟರ್; ಒಟ್ಟು 36 ಉಗ್ರರ ಹತ್ಯೆ

ಈ ವರ್ಷದ ಆರಂಭದಿಂದ ಕಾಶ್ಮೀರದಲ್ಲಿ ನಡೆದ 21ನೇ ಎನ್​ಕೌಂಟರ್ ಇದಾಗಿದೆ. ಇದುವರೆಗೂ ಭದ್ರತಾ ಪಡೆ ಸಿಬ್ಬಂದಿ 36 ಉಗ್ರರನ್ನು ಹತ್ಯೆ ಮಾಡಿದ್ದಾರೆ.

Terrorist Encounter: ಕಾಶ್ಮೀರದ ಆವಂತಿಪೊರಾದಲ್ಲಿ ಮತ್ತೊಂದು ಎನ್​ಕೌಂಟರ್; ಒಟ್ಟು 36 ಉಗ್ರರ ಹತ್ಯೆ
ಸೇನೆಯಿಂದ ಉಗ್ರರ ಎನ್​ಕೌಂಟರ್
TV9 Web
| Edited By: |

Updated on:Mar 15, 2022 | 5:04 PM

Share

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ (Pulwama) ಜಿಲ್ಲೆಯ ಅವಂತಿಪೊರಾದ ಚಾರ್ಸೂ ಗ್ರಾಮದಲ್ಲಿ ಇಂದು (ಮಂಗಳವಾರ) ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ (Terrorist Encounter) ಮಾಡಲಾಗಿದೆ. ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಖಚಿತಪಡಿಸಿದ್ದಾರೆ. ಆದರೆ, ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಆವಂತಿಪೊರಾದಲ್ಲಿ ಇದುವರೆಗೂ ಒಟ್ಟು 36 ಉಗ್ರರನ್ನು ಸದೆಬಡಿಯಲಾಗಿದೆ.

ಚಾರ್ಸೂ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಶೋಧ ಕಾರ್ಯ ನಡೆಸುತ್ತಿರುವ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ ಅಡಗಿಕೊಂಡಿದ್ದ ಭಯೋತ್ಪಾದಕನು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದನು. ಇದರಿಂದ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದಿದ್ದಾರೆ.

ಹೆಚ್ಚಿನ ಭಯೋತ್ಪಾದಕರು ಕಾರ್ಡನ್‌ನೊಳಗೆ ಇದ್ದಾರೆ ಎಂದು ಭದ್ರತಾ ಪಡೆಗಳು ಶಂಕೆ ವ್ಯಕ್ತಪಡಿಸುತ್ತಿವೆ. ಆದ್ದರಿಂದ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಕಾಶ್ಮೀರದಲ್ಲಿ ಸೇನೆ, ಜಮ್ಮು ಕಾಶ್ಮೀರದ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಜಂಟಿ ತಂಡಗಳ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳು ಮುಂದುವರಿದಿವೆ.

ಈ ವರ್ಷದ ಆರಂಭದಿಂದ ನಡೆದ 21ನೇ ಎನ್​ಕೌಂಟರ್ ಇದಾಗಿದೆ. ಇದುವರೆಗೂ ಭದ್ರತಾ ಪಡೆಗಳು 36 ಉಗ್ರರನ್ನು ಹತ್ಯೆ ಮಾಡಿದ್ದಾರೆ. 20ಕ್ಕೂ ಹೆಚ್ಚು ಉಗ್ರರನ್ನು ಜೀವಂತವಾಗಿ ಹಿಡಿದಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮೂರು ಪ್ರತ್ಯೇಕ ಎನ್​ಕೌಂಟರ್: ನಾಲ್ವರು ಉಗ್ರರ ಸಾವು

Terrorists Encounter: ಜಮ್ಮು ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

Published On - 5:02 pm, Tue, 15 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ