ಮೈಸೂರು: ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

| Updated By: Rakesh Nayak Manchi

Updated on: Jan 05, 2024 | 7:26 AM

ಮೈಸೂರು ಜಿಲ್ಲೆಯಲ್ಲಿ ಒಂಬತ್ತು ವರ್ಷಗಳ ಹಿಂದೆ ವೈದ್ಯರೊಬ್ಬರನ್ನು ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರಕ್ಕೆ ಸಹಿ ಹಾಕಿಸಿ ಸುಲಿಗೆ ಮಾಡಿದ್ದ ಪ್ರಕರಣ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕುವೆಂಪು ನಗರ ಠಾಣಾ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆ, ನಂಜನಗೂಡಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ್ನು ಅಮಾನತು ಮಾಡಲಾಗಿದೆ.

ಮೈಸೂರು: ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ
ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ವೈದ್ಯನ ಕಿಡ್ನಾಪ್ ಪ್ರಕರಣದ ಆರೋಪಿ ಫಣಿರಾಜ್​ನನ್ನು ಬಂಧಿಸಲಾಗಿದೆ
Follow us on

ಮೈಸೂರು, ಜ.5: ಜಿಲ್ಲೆಯಲ್ಲಿ (Mysuru) ನಡೆದಿದ್ದ ವೈದ್ಯನ ಅಪಹರಣ (Kidnap) ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ.

ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಡಾ.ಮಹೇಶ್ ಎಂಬವರನ್ನು 2014 ರಲ್ಲಿ ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರಕ್ಕೆ ಸಹಿ ಹಾಕಿಸಿ 3 ಲಕ್ಷ ರೂಪಾಯಿ ಸುಲಿಗೆ ಮಾಡಿ ಆರೋಪಿ ಪರಾರಿಯಾಗಿದ್ದನು. ನಂತರ ಮೈಸೂರಿಗೆ ಆಗಮಿಸಿದ್ದ ವೈದ್ಯ ಮಹೇಶ್, ಕುವೆಂಪು ನಗರ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತುನ ಮಾಡಲಾಗಿದೆ. ಲೈಂಗಿಕ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕ ಪ್ರಕಾಶ್ ವಿರುದ್ಧ ವಿದ್ಯಾರ್ಥಿನಿಯರ ಪೋಷಕರು ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ಬೆಳಗ್ಗೆ ಕೆಲಸಕ್ಕೆ ಸೇರಿದ, ಮಧ್ಯಾಹ್ನ ಮಾಲೀಕನ ಮಗಳನ್ನೆ ಕಿಡ್ನ್ಯಾಪ್ ಮಾಡಿದ!

ಮೈ ಕೈ ಮುಟ್ಟುವುದು, ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ಸಂಬಂಧ ಪೋಕ್ಸೋದಡಿ ಪ್ರಕರಣ ದಾಖಲು ವಜಾಕ್ಕೆ ಡಿಡಿಪಿಐಗೆ ಶಿಫಾರಸ್ಸು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 am, Fri, 5 January 24