Dakshina Kannada: ಚಿನ್ನಕ್ಕಾಗಿ ಅಜ್ಜ-ಅಜ್ಜಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಂಗಳೂರಿನಲ್ಲಿ ಸಿಕ್ಕಿಬಿದ್ದ

ಚಿನ್ನಕ್ಕಾಗಿ ಅಜ್ಜ ಅಜ್ಜಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ, ಮಂಗಳೂರಿನ ಸ್ಟ್ರೀಟ್‌ನಲ್ಲಿರುವ ಚಿನ್ನದ ಅಂಗಡಿಯೊಂದಕ್ಕೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಾಗ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

Dakshina Kannada: ಚಿನ್ನಕ್ಕಾಗಿ ಅಜ್ಜ-ಅಜ್ಜಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಂಗಳೂರಿನಲ್ಲಿ ಸಿಕ್ಕಿಬಿದ್ದ
ಆರೋಪಿ, ಮೃತ ಅಜ್ಜಿ, ಅಜ್ಜ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 26, 2023 | 12:41 PM

ದಕ್ಷಿಣ ಕನ್ನಡ, ಜು.26: ಮಂಗಳೂರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಗರದ ಸ್ಟ್ರೀಟ್‌ನಲ್ಲಿರುವ ಚಿನ್ನದ ಅಂಗಡಿಯೊಂದಕ್ಕೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಆಗಮಿಸಿದ್ದ. ಈ ವೇಳೆ ಆತನ ಮೇಲೆ ಅನುಮಾನಗೊಂಡು ಮಂಗಳೂರು(Mangalore) ಉತ್ತರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದರು. ಬಳಿಕ ಆತನನ್ನ ವಿಚಾರಿಸಿದಾಗ ಇತ ‘ತ್ರಿಶೂರ್‌ನ ವೈಲತ್ತೂರ್ ನಿವಾಸಿ ಅಹ್ಮದ್ ಅಕ್ಮಲ್ (27) ಎಂಬುದು ಬೆಳಕಿಗೆ ಬಂದಿದೆ. ಬಳಿಕ ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಇತ ಜುಲೈ 23 ರಂದು ಕೇರಳದ ತ್ರಿಶೂರ್‌ನಲ್ಲಿ ವಾಸವಾಗಿದ್ದ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿಕೊಂಡು ಬಂದಿದ್ದಾಗಿ ಬಾಯ್ಬಿಟಿದ್ದಾನೆ. ಸಧ್ಯ ಈ ಪ್ರಕರಣವನ್ನ ಬೈಂದೂರು ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಪತ್ತೆ ಮಾಡಿದೆ.

ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ್ದ ಆರೋಪಿ

ಇನ್ನು ಆರೋಪಿ ಅಹ್ಮದ್ ಅಕ್ಮಲ್ ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ್ದ. ಹಾಗಾಗಿ ಇಲ್ಲಿನ ಬಗ್ಗೆ ಆತನಿಗೆ ಗೊತ್ತಿದ್ದರಿಂದ ಅಜ್ಜ ಅಜ್ಜಿಯನ್ನ ಕೊಲೆ ಮಾಡಿ ಚಿನ್ನಾಭರಣ ದೋಚಿಕೊಂಡು ಮಂಗಳೂರಿಗೆ ಬಂದಿದ್ದ. ಇನ್ನು ಆತನನ್ನ ಪೊಲೀಸರು ಪರಿಶೀಲಿಸಿದಾಗ ಒಂದು ಚಾಕು, ಸ್ಕ್ರೂಡ್ರೈವರ್, ಮಂಗಳೂರು ವಿಶ್ವವಿದ್ಯಾನಿಲಯದ ಮಾರ್ಕ್ಸ್ ಕಾರ್ಡ್, ಪಾಸ್‌ಪೋರ್ಟ್, ಆಧಾರ್, ಸೌತ್ ಇಂಡಿಯಾ ಬ್ಯಾಂಕ್ ಕಾರ್ಡ್, ಆಕ್ಸಿಸ್ ಬ್ಯಾಂಕ್ ವೀಸಾ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವ ಪರ್ಸ್. ಒಂದು ಮುತ್ತಿನ ಸರ, ಮೂರು ಜೋಡಿ ಕಿವಿಯೋಲೆಗಳು, ಒಂದು ಸಣ್ಣ ಚಿನ್ನದ ಸರದ ಜೊತೆ ಬೆರಳಿನ ಉಂಗುರಗಳು ಮತ್ತು ಎರಡು ಚಿನ್ನದ ಬಳೆಗಳು ಇದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಕಾಲೇಜು ವಿದ್ಯಾರ್ಥಿ ಶವ ಪತ್ತೆ ಪ್ರಕರಣ; ಕೊಟ್ಟ ಹಣ ವಾಪಾಸ್​ ಕೇಳಿದ್ದಕ್ಕೆ ಸ್ನೇಹಿತರಿಂದಲೇ ಕೊಲೆ, ಇಬ್ಬರ ಬಂಧನ

ಪತ್ನಿಯ ಹತ್ಯೆಗೈದು ಪತಿಯ ಹೈಡ್ರಾಮ; ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಅಸಲಿ ಸಂಗತಿ ಬಯಲು, ಆರೋಪಿ ವಶಕ್ಕೆ

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿ ಹೈಡ್ರಾಮ ಮಾಡಿದ್ದ ಪತಿಯ ಕೃತ್ಯ ಕೆಲವೇ ಗಂಟೆಗಳಲ್ಲಿ ಅಸಲಿ ಸಂಗತಿ ಬಯಲಾಗಿದ್ದು, ಆರೋಪಿಯನ್ನ ಅರೆಸ್ಟ್​ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್ ಆರ್​ಬಿಆರ್​ ಲೇಔಟ್​ನಲ್ಲಿ ನಡೆದಿದೆ. ಕೆಂಚಮ್ಮ (19) ಕೊಲೆಯಾದ ಮಹಿಳೆ. ಕಳೆದ ಆರು ತಿಂಗಳ ಹಿಂದೆ ಕೆಂಚಮ್ಮ ಹಾಗೂ ಸಿದ್ದಪ್ಪ ಬಸವರಾಜ್ ಬೆನ್ನೂರು ಜೊತೆ ವಿವಾಹವಾಗಿತ್ತು. ಮದುವೆಯಾದಗಿನಿಂದ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅದರಂತೆ ತಡರಾತ್ರಿ 2 ಗಂಟೆಗೆ ಹೆಂಡತಿಯ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬೀಗಿದು ಹೈಡ್ರಾಮ ಮಾಡಿದ್ದ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ ವೇಳೆ, ಇದು ಕೊಲೆ ಎಂಬ ಅನುಮಾನ ಬಂದಿತ್ತು. ಕೋಡಲೇ ಸಿದ್ದಪ್ಪನನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಸಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್