ಬೆಂಗಳೂರು: ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್ನ ಬಂಧನವಾಗಿದೆ. ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವಿಶಾಲ್ ಕುಮಾರ್, ಭೀಮಾಂಶು ಠಾಕೂರ್, ಸಾಗರ್, ಮಹಾಬಲಿಸಿಂಗ್, ಸುಬರ್ಜಿತ್ ಸಿಂಗ್ ಬಂಧಿತ ಆರೋಪಿಗಳು.
Loconto ಮೂಲಕ ಬೆಂಗಳೂರು ಮತ್ತು ಅಂತರ್ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗದ ಆಸೆ ತೋರಿಸಿ ಕೆಲಸ ತೆಗೆದು ಕೊಡುವುದಾಗಿ ಹೇಳಿ ಮೋಸ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂಟರ್ ನ್ಯಾಷನಲ್ ಕೊರಿಯರ್ ಸರ್ವೀಸ್ ಮೂಲಕ ಈ ಗ್ಯಾಂಗ್ಗಳಿಗೆ ಡ್ರಗ್ಸ್ ಕಳುಹಿಸಲಾಗುತ್ತಿತ್ತು.
ವಿವಿಧ ನಗರಗಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ, ಪೋನ್ ಪೇ ಮೂಲಕ ಹಣ ಪಡೆಯುತ್ತಿದ್ದರು. ಹಣ ಪಡೆದ ಬಳಿಕ ಉದ್ಯೋಗದ ನೆಪದಲ್ಲಿ ಡ್ರಗ್ಸ್ ಕಳುಹಿಸಿ ಯುವಕರ ಮೂಲಕ ಸಪ್ಲೈ ಮಾಡಿಸುತ್ತಿದ್ದರು.
ಗಿಫ್ಟ್ ಬಾಕ್ಸ್, ಕೊರಿಯರ್ ಎನ್ ವಲಪ್ ಮುಖಾಂತರ ಡ್ರಗ್ಸ್ ಸರಬರಾಜು ಆರೋಪಿಗಳಿಂದ ಎರಡು ಕೋಟಿ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಜೊತೆಗೆ ಐದು ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.
ಯುವತಿಯನ್ನು ಪ್ರೀತಿಸುವ ವಿಚಾರಕ್ಕಾಗಿ ಬಡಿದಾಡಿಕೊಂಡ ವಿದ್ಯಾರ್ಥಿಗಳು
ಬೆಳಗಾವಿ: ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ವಿಚಾರವಾಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದೆ . ಗಲಾಟೆಯಲ್ಲಿ ವಿದ್ಯಾರ್ಥಿಗಳಿಬ್ಬರಿಗೂ ತೀವ್ರ ಗಾಯಗೊಂಡಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಓರ್ವನಿಗೆ ತಲೆಗೆ ತೀವ್ರ ಗಾಯವಾಗಿದೆ, ಮತ್ತೊಬ್ಬ ವಿದ್ಯಾರ್ಥಿಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರು ಯುವತಿ ಪ್ರೀತಿಸುವ ವಿಚಾರಕ್ಕೆ ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ
Published On - 12:06 pm, Tue, 2 August 22