ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​

ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿಯವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​
ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 08, 2023 | 6:49 AM

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು(Acharya Shri 108 Kamkumarnandi Maharaj) ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಮೊನ್ನೆ (ಜು.6) ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಜೈನಮುನಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿಗಳು

ಇನ್ನು ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಚಿಕ್ಕೋಡಿ ಪೊಲೀಸರು ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹುಡುಕಾಟ ಶುರು ಮಾಡಿದ್ದರು. ಈ ಹಿನ್ನಲೆ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ಹತ್ಯೆ ಬಗ್ಗೆ ಮಾಹಿತಿ ನೀಡಿದ್ದರು. ನಾವೇ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆದರೆ, ಇನ್ನೂ ನಿನ್ನೆಯಿಂದ ಜೈನಮುನಿ ಮೃತದೇಹ ಪತ್ತೆಯಾಗದ ಕಾರಣ ಇಂದು ಮುಂಜಾನೆಯಿಂದ 6.30 ರಿಂದ ಪುನಃ ಹುಡುಕಾಟ ಶುರು ಮಾಡಿದ್ದಾರೆ.

ಇದನ್ನೂ ಓದಿ:Belagavi News: ಇದ್ದಕ್ಕಿದ್ದಂತೆ ಆಶ್ರಮದಿಂದ ನಾಪತ್ತೆಯಾದ ಜೈನ ಮುನಿ; ಭಕ್ತರಲ್ಲಿ ಆತಂಕ

ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆಂದು ಸ್ಪಷ್ಟ ಮಾಹಿತಿ ನೀಡದೇ ಪೊಲೀಸರನ್ನೇ ಸತಾಯಿಸಿದ ಆರೋಪಿಗಳು

ಇನ್ನು ಕೊಲೆ ಬಳಿಕ ಜೈನಮುನಿ ಶವ ಬಿಸಾಕಿರುವ ಬಗ್ಗೆ ಆರೋಪಿಗಳು ಗೊಂದಲದ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ. ಒಮ್ಮೆ ಶವವನ್ನು ಕತ್ತರಿಸಿ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಗೆ ಎಸೆದಿದ್ದೇವೆ ಎಂದ ಆರೋಪಿಗಳು, ಮತ್ತೊಮ್ಮೆ ಶವವನ್ನು ನದಿಗೆ ಎಸೆದಿದ್ದೇವೆ ಎನ್ನುತ್ತಿದ್ದಾರೆ. ಇನ್ನು ಜೈನಮುನಿ ಮೃತದೇಹಕ್ಕಾಗಿ ಖಟಕಬಾವಿ ಗ್ರಾಮ ಸೇರಿ ವಿವಿಧೆಡೆ ರಾತ್ರಿಯೀಡಿ ಪೊಲೀಸರಿಂದ ಶೋಧ ಆರಂಭವಾಗಿದ್ದು, ಇಂದು ಕೂಡ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲು ನಿರ್ಧಾರ ಮಾಡಲಾಗಿದೆ.

ಹಲವು ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿದ್ದ ಜೈನ ಮುನಿಗಳು

ಜೈನ ಮುನಿಗಳು ಸುಮಾರು 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದರು. ಇನ್ನು ಅವರು ನಾಪ್ತೆಯಾದಾಗ, ಅವರು ವಾಸವಿರುವ ಕೋಣೆಯಲ್ಲಿಯೇ ಪಿಂಚಿ, ಕಮಂಡಲು ಹಾಗೂ ಮೊಬೈಲ್​ನ್ನು ಬಿಟ್ಟು ಹೋಗಿದ್ದರು. ಜೈನ ಮುನಿಗಳು ಎಲ್ಲಿಯೇ ಹೋಗಬೇಕೆಂದರೂ ಪಿಂಚಿ, ಕಮಂಡಲು ತಗೆದುಕೊಂಡು ಹೋಗುತ್ತಿದ್ದರು, ಹೀಗಿರುವಾಗ ಈ ಎಲ್ಲ ವಸ್ತುಗಳು ಕೋಣೆಯಲ್ಲಿಯೇ ಇರುವ ಹಿನ್ನೆಲೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ಕೂಡಲೇ ಈ ಕುರಿತು ಠಾಣೆಯಲ್ಲಿ ದೂರು ನೀಡಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ