ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​

ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನ ಮುನಿಯವರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​
ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 08, 2023 | 6:49 AM

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ(Chikkodi) ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು(Acharya Shri 108 Kamkumarnandi Maharaj) ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಮೊನ್ನೆ (ಜು.6) ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಜೈನಮುನಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿಗಳು

ಇನ್ನು ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಚಿಕ್ಕೋಡಿ ಪೊಲೀಸರು ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹುಡುಕಾಟ ಶುರು ಮಾಡಿದ್ದರು. ಈ ಹಿನ್ನಲೆ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ಹತ್ಯೆ ಬಗ್ಗೆ ಮಾಹಿತಿ ನೀಡಿದ್ದರು. ನಾವೇ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆದರೆ, ಇನ್ನೂ ನಿನ್ನೆಯಿಂದ ಜೈನಮುನಿ ಮೃತದೇಹ ಪತ್ತೆಯಾಗದ ಕಾರಣ ಇಂದು ಮುಂಜಾನೆಯಿಂದ 6.30 ರಿಂದ ಪುನಃ ಹುಡುಕಾಟ ಶುರು ಮಾಡಿದ್ದಾರೆ.

ಇದನ್ನೂ ಓದಿ:Belagavi News: ಇದ್ದಕ್ಕಿದ್ದಂತೆ ಆಶ್ರಮದಿಂದ ನಾಪತ್ತೆಯಾದ ಜೈನ ಮುನಿ; ಭಕ್ತರಲ್ಲಿ ಆತಂಕ

ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆಂದು ಸ್ಪಷ್ಟ ಮಾಹಿತಿ ನೀಡದೇ ಪೊಲೀಸರನ್ನೇ ಸತಾಯಿಸಿದ ಆರೋಪಿಗಳು

ಇನ್ನು ಕೊಲೆ ಬಳಿಕ ಜೈನಮುನಿ ಶವ ಬಿಸಾಕಿರುವ ಬಗ್ಗೆ ಆರೋಪಿಗಳು ಗೊಂದಲದ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ.
ಒಮ್ಮೆ ಶವವನ್ನು ಕತ್ತರಿಸಿ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಗೆ ಎಸೆದಿದ್ದೇವೆ ಎಂದ ಆರೋಪಿಗಳು,
ಮತ್ತೊಮ್ಮೆ ಶವವನ್ನು ನದಿಗೆ ಎಸೆದಿದ್ದೇವೆ ಎನ್ನುತ್ತಿದ್ದಾರೆ. ಇನ್ನು ಜೈನಮುನಿ ಮೃತದೇಹಕ್ಕಾಗಿ ಖಟಕಬಾವಿ ಗ್ರಾಮ ಸೇರಿ ವಿವಿಧೆಡೆ ರಾತ್ರಿಯೀಡಿ ಪೊಲೀಸರಿಂದ ಶೋಧ ಆರಂಭವಾಗಿದ್ದು, ಇಂದು ಕೂಡ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲು ನಿರ್ಧಾರ ಮಾಡಲಾಗಿದೆ.

ಹಲವು ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿದ್ದ ಜೈನ ಮುನಿಗಳು

ಜೈನ ಮುನಿಗಳು ಸುಮಾರು 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದರು. ಇನ್ನು ಅವರು ನಾಪ್ತೆಯಾದಾಗ, ಅವರು ವಾಸವಿರುವ ಕೋಣೆಯಲ್ಲಿಯೇ ಪಿಂಚಿ, ಕಮಂಡಲು ಹಾಗೂ ಮೊಬೈಲ್​ನ್ನು ಬಿಟ್ಟು ಹೋಗಿದ್ದರು. ಜೈನ ಮುನಿಗಳು ಎಲ್ಲಿಯೇ ಹೋಗಬೇಕೆಂದರೂ ಪಿಂಚಿ, ಕಮಂಡಲು ತಗೆದುಕೊಂಡು ಹೋಗುತ್ತಿದ್ದರು, ಹೀಗಿರುವಾಗ ಈ ಎಲ್ಲ ವಸ್ತುಗಳು ಕೋಣೆಯಲ್ಲಿಯೇ ಇರುವ ಹಿನ್ನೆಲೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ಕೂಡಲೇ ಈ ಕುರಿತು ಠಾಣೆಯಲ್ಲಿ ದೂರು ನೀಡಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Mahantesh Kurbet
Follow Us