ಬೆಂಕಿಯಲ್ಲಿ ಬೆಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವೃದ್ಧ ಸಾವು: ತಂದೆ ತಾಯಿ ಎದುರೇ ಮಗನ ಹತ್ಯೆ, ರಥದ ಚಕ್ರಕ್ಕೆ ಸಿಲುಕಿ ಓರ್ವ ಸಾವು!

ಬೆಂಕಿಯಲ್ಲಿ ಬೆಂದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾರೆ. 1 ಎಕರೆ ಜಮೀನಿಗಾಗಿ ನಡೆದಿದ್ದ ಜಗಳದ ಪ್ರಕರಣ ಇದಾಗಿದೆ.

ಬೆಂಕಿಯಲ್ಲಿ ಬೆಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವೃದ್ಧ ಸಾವು: ತಂದೆ ತಾಯಿ ಎದುರೇ ಮಗನ ಹತ್ಯೆ, ರಥದ ಚಕ್ರಕ್ಕೆ ಸಿಲುಕಿ ಓರ್ವ ಸಾವು!
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:May 15, 2022 | 2:17 PM

ಬೆಂಗಳೂರು ಗ್ರಾಮಾಂತರ: ಜಮೀನಿಗಾಗಿ ನಡೆದಿದ್ದ ಜಗಳ ತಾರಕಕ್ಕೇರಿ ವೃದ್ಧರೊಬ್ಬರನ್ನು ಪೆಟ್ರೋಲ್(Petrol) ಹಾಕಿ ಬೆಂಕಿ ಹಚ್ಚಲಾಗಿತ್ತು. ಗಂಭೀರವಾಗಿ ಸುಟ್ಟು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗಾಯಾಳು ವೃದ್ಧ ಸಾವನ್ನಪ್ಪಿದ್ದಾರೆ. ನೆನ್ನೆ ರಾತ್ರಿ ವಿಕ್ಟೋರಿಯಾ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ರಾಮಯ್ಯ (64) ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ(bangalore rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಗ್ರಾಮದಲ್ಲಿ 4 ಎಕರೆ ಜಮೀನು ಪೈಕಿ ಒಂದು ಎಕರೆ ಜಮೀನಿಗಾಗಿ ವಿವಾದ ಏರ್ಪಟ್ಟಿತ್ತು. ಅದರಂತೆ ಆಸ್ತಿ(Property)ಗಾಗಿ ಮೇ 9ರಂದು ಜಗಳ ನಡೆದಿತ್ತು. ಈ ವೇಳೆ ಸ್ವಂತ ಚಿಕ್ಕಪ್ಪನ ಮೇಲೆಯೇ ದಾಯಾದಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬೆಂಕಿಯಿಂದ ಗಂಭೀರವಾಗಿ ಸುಟ್ಟಿದ್ದ ರಾಮಯ್ಯ, ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಹೊಸಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು 6 ಮಂದಿಯನ್ನು ಬಂಧಿಸಿದ್ದಾರೆ.

ತಂದೆ ತಾಯಿ ಎದುರೇ ಮಗನ ಹತ್ಯೆ

ಬೆಳಗಾವಿ: ನಗರದಲ್ಲಿ ಗಾಂಜಾ ವ್ಯಸನಿಗಳ ಅಟ್ಟಹಾಸ ಮುಂದುವರೆದಿದ್ದು, ನಿನ್ನೆ ರಾತ್ರಿ ಗಾಂಜಾ(Drug) ವ್ಯಸನಿಗಳ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದೆ. ಈ ಘಟನೆ ಬೆಳಗಾವಿಯ ಹಳೇ ಪಿ.ಬಿ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಲಗಾ ಗ್ರಾಮದ ವಿಜಯನಗರ ನಿವಾಸಿ ಮಹೇಶ್ ಕಾಮಣ್ಣಾಜೆ (35) ಎಂದು ಗುರುತಿಸಲಾಗಿದೆ.

ಬೈಕ್ ಅನ್ನು ಓವರ್ ಟೇಕ್ ಮಾಡಿದ ಎಂಬ ಒಂದೇ ಒಂದು ಕಾರಣಕ್ಕೆ 6 ಜನರಿದ್ದ ದುಷ್ಕರ್ಮಿಗಳ ತಂಡವೊಂದು ಗಾಂಜಾ ಸೇವಿಸಿ ನಿನ್ನೆ ರಾತ್ರಿ ಮಹೇಶ್ ಅವರ ಕಾರು ಕೀ ಕಿತ್ತುಕೊಂಡ ಜಗಳಕ್ಕೆ ನಿಂತರು. ಇದೇ ವೇಳೆ ಮಹೇಶ್ ಅವರ ತಂದೆ ಮತ್ತು ತಾಯಿ ಆಸ್ಪತ್ರೆಗೆಂದು ಹೋಗುತ್ತಿದ್ದಾಗ ಮಗನ ಜೊತೆ ನಡೆಯುತ್ತಿದ್ದ ಜಗಳ ಕಂಡು ಬಿಡಿಸಲು ಹೋಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಕೂಡಲೇ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಮಹೇಶ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಚಾಮರಾಜನಗರ: ರಥದ ಚಕ್ರಕ್ಕೆ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸರ್ಪಭೂಷಣ (24) ಎಂದು ಗುರುತಿಸಲಾಗಿದೆ. ಕೊರೊನಾ ಹಿನ್ನೆಲೆ ಕಳೆದ 2ವರ್ಷಗಳಿಂದ ಪಾರ್ವತಿ ಬೆಟ್ಟದಲ್ಲಿ ನಡೆಯುತ್ತಿದ್ದ ಪಾರ್ವತಾಂಬ ರಥೋತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಈ ಬಾರಿ ವಿಜ್ರಂಭನೆಯಿಂದ ಆಯೋಜಿಸಲಾಗಿತ್ತು. ಅದರಂತೆ ರಥೋತ್ಸವಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಅಲ್ಲದೆ, ಜನಸಂದಣಿ ಹೆಚ್ಚಾಗಿ ನೂಕುನುಗ್ಗಲು ನಡೆಯಿತು. ಈ ವೇಳೆ ಸರ್ಪಭೂಷಣ ಅವರು ರಥದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮತ್ತೊರ್ವ ಭಕ್ತ ಸ್ವಾಮಿ (35) ಎಂಬವರು ತೊಡೆ ಮುರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Published On - 2:17 pm, Sun, 15 May 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ