ಟೆಂಪೋ ಟ್ರಾವಲರ್ ವಾಹನ ಪಲ್ಟಿ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು, ಧರೆಗುರುಳಿದ ಬೃಹತ್ ಗಾತ್ರದ ಬೇವಿನ ಮರ

ಟೆಂಪೋ ಟ್ರಾವಲರ್ ವಾಹನ ಪಲ್ಟಿಯಾಗಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಚಾಲಕನಿಗೆ ಮೂರ್ಛೆ ರೋಗ ಇದ್ದು, ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ಹೊಡೆದಿದೆ.

ಟೆಂಪೋ ಟ್ರಾವಲರ್ ವಾಹನ ಪಲ್ಟಿ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು, ಧರೆಗುರುಳಿದ ಬೃಹತ್ ಗಾತ್ರದ ಬೇವಿನ ಮರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:May 14, 2022 | 5:22 PM

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವಲರ್​ವೊಂದು(Tempo Traveler) ಪಲ್ಟಿ ಹೊಡೆದ ಘಟನೆ ಸಾಗರ ತಾಲೂಕಿನ ಸಿಗಂದೂರು ದೇವಸ್ಥಾನದ ಸಮೀಪ ಕಳಸವಳ್ಳಿ ಬಳಿ ನಡೆದಿದೆ. ಸಿಗಂದೂರಿಗೆ ದೇವಿ ದರ್ಶನಕ್ಕೆ ಬೆಂಗಳೂರು ಸಮೀಪದ ಬಿಡದಿ ಮೂಲದ ಭಕ್ತರು ಟೆಂಪೋ ಟ್ರಾವಲರ್​ನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಚಾಲಕನಿಗೆ ಮೂರ್ಛೆ(Fainting) ತಪ್ಪಿದ್ದು, ಪರಿಣಾಮವಾಗಿ ಚಾಲನೆ ನಿಯಂತ್ರಣ ತಪ್ಪಿ ಸಾಗರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿಗಂದೂರು ದೇವಸ್ಥಾನದ ಸಮೀಪ ಕಳಸವಳ್ಳಿ ಬಳಿ ಪಲ್ಟಿ ಹೊಡೆದಿದೆ. ಟೆಂಪೋದಲ್ಲಿ ಬಿಡದಿ ಮೂಲದ 10 ಮಂದಿ ಭಕ್ತರು ಪ್ರಯಾಣಿಸುತ್ತಿದ್ದರು. ಇವರಲ್ಲಿ ನಾಲ್ವರಿಗೆ ಗಾಯ(Injury)ಗಳಾಗಿದ್ದು, ಓವರ್ನ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನು ಸಿಗಂದೂರು(Sigandoor) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೆಂಪೋ ಚಾಲಕನಿಗೆ ಮೂರ್ಛೆ ರೋಗ ಇದೆ ಎಂದು ಹೇಳಲಾಗುತ್ತಿದೆ.

ಮನೆಯ ಬಾಗಿಲು ಮುರಿದು ಕಳ್ಳತನ

ಚಾಮರಾಜನಗರ: ಮನೆಯ ಬಾಗಿಲು ಮುರಿದ ಖದೀಮರು ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮಸ್ವಾಮಿ‌ ಬಡಾವಣೆಯ ಮಹಮ್ಮದ್ ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಮ್ಮದ್ ಇಸ್ಮಾಯಿಲ್ ತನ್ನ ಕುಟುಂಬದ ಸದಸ್ಯರೊಂದಿಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿಗೆ ತೆರಳಿದ್ದರು. ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು, ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಖದೀಮರ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಧರೆಗುರುಳಿದ ಬೇವಿನ ಮರ, ತಪ್ಪಿದ ಅನಾಹುತ!

ಕೊಪ್ಪಳ: ಬೇವಿನ ಮರವೊಂದು(Neem tree) ಧರೆಗುರುಳಿದ ಘಟನೆ ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅನಾಹುತ ತಪ್ಪಿದಂತಾಗಿದೆ. ನಗರದ ಕನಕಗಿರಿ ಓಣಿಯಲ್ಲಿ ಬೇವಿನ ಮರವೊಂದು ಬೃಹತ್ ಗಾತ್ರದಲ್ಲಿ ಬೆಳೆದುನಿಂತಿತ್ತು. ಈ ಮರ ಇಂದು ಧರೆಗೆ ಉರುಳಿಬಿದ್ದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಆಟೋ ಮತ್ತು ಬೈಕ್ ಮರದ ಕೆಳಗೆ ಸಿಲುಕಿಕೊಂಡಿದೆ. ಜೊತೆಗೆ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Published On - 5:21 pm, Sat, 14 May 22

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ