ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

Kalaburagi News: 1992 ರಿಂದಲೇ ಕಳ್ಳತನ ಮಾಡುತ್ತಿದ್ದ ಉದಯ್ ಪಾರ್ದಿ ಎಂಬ ಆರೋಪಿಯನ್ನು ನಿನ್ನೆ(ಆ.17) ಕಲಬುರಗಿಯ ಅಶೋಕ ನಗರ ಠಾಣೆಯ ಪೊಲೀಸರು ಬಂಧಿಸಿ, ಕರೆತರುತ್ತಿದ್ದರು. ಈ ವೇಳೆ ಆತ ಮೃತಪಟ್ಟಿದ್ದ. ಇದನ್ನು ಪೊಲೀಸರು ಹೃದಯಾಘಾತದಿಂದ ಆಗಿದೆ ಎಂದಿದ್ದರು. ಆದರೆ, ಇದೀಗ ಮೃತನ ಕುಟುಂಬದವರು ಕೊಲೆ ಎಂದು ಆರೋಪಿಸಿದ್ದಾರೆ.

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು
ಮೃತ ವ್ಯಕ್ತಿ ಸಂಬಂಧಿಕರ ಗೋಳಾಟ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 18, 2023 | 8:49 AM

ಕಲಬುರಗಿ, ಆ.18: ನಿನ್ನೆ(ಆ.17) ಕಲಬುರಗಿ(Kalburagi)ಯ ಅಶೋಕ ನಗರ ಠಾಣೆಯ ಪೊಲೀಸರು ಕಳ್ಳತನ(Theft) ಆರೋಪಿಯನ್ನು ವಿಚಾರಣೆಗೆ ಕರೆತರುತ್ತಿದ್ದರು. ಈ ವೇಳೆ ಉದಯ್ ಪಾರ್ದಿ(55) ಮೃತಪಟ್ಟಿದ್ದರು. ಬಳಿಕ ಪೊಲೀಸರು(Police) ಹೃದಯಾಘಾತದಿಂದ ಆರೋಪಿ ಸಾವನ್ನಪ್ಪಿರುವುದಾಗಿ ಹೇಳಿದ್ದರು. ಆದ್ರೆ, ಉದಯ್​ನನ್ನು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಆರೋಪ ಮಾಡಿರುವ ಕುಟುಂಬದವರು, ಈ ಬಗ್ಗೆ ಅಶೋಕ ನಗರ ಠಾಣೆಯಲ್ಲಿ ಮೂವರು ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಇದೀಗ ಕುಟುಂಬದವರು ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲು ಮಾಡಲಾಗಿದೆ.

1992 ರಿಂದಲೇ ಕಳ್ಳತನ ಮಾಡ್ತಿದ್ದ ಮೃತ ಉದಯ್ ಪಾರ್ದಿ

ಇನ್ನು ಉದಯ್ ಪಾರ್ದಿ 1992 ರಿಂದಲೇ ಕಳ್ಳತನದಲ್ಲಿ ತೊಡಗಿದ್ದ. ಈ ಹಿನ್ನಲೆ ಆತನ ಮೇಲೆ ಆಗಲೇ ಪೊಲೀಸರು ಎಂಓಬಿ ಸೀಟ್ ಓಪನ್ ಮಾಡಿದ್ದರು. ಕಳ್ಳತನ ಮಾಡುವುದು, ಕಳ್ಳತನ ವಸ್ತುಗಳನ್ನು ಖರೀದಿಸಿ ಮತ್ತೆ ಮಾರಾಟ ಮಾಡುತ್ತಿದ್ದ ಉದಯ್​ನನ್ನು ಪೊಲೀಸರು ಬಂಧಿಸಿ ಕರೆತರುವ ವೇಳೆ ಈ ದುರ್ಘಟನೆ ನಡೆದಿದೆ. ಇದೀಗ ಈ ಕುರಿತು ಕೊಲೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ನಡೆಸಿದ ಮೇಲೆ ಕೊಲೆಯೋ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾನೋ ತಿಳಿಯಲಿದೆ.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಕಾಫಿ‌ ಎಸ್ಟೇಟ್ ಮ್ಯಾನೇಜರ್ ಅನುಮಾನಾಸ್ಪದ ಸಾವು, ಹೆಣ್ಣು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ: ಸೈಕಲ್ ಸವಾರ ಸಾವು

ಬೆಂಗಳೂರು: ನಿನ್ನೆ(ಆ.17) ಪುನೀತ್​ ರಾಜ್​ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್​ಮೆಂಟ್ ಬಳಿ ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸೈಕಲ್ ಸವಾರ ಬಲಿಯಾಗಿರುವಂತಹ ಘಟನೆ ನಡೆದಿದೆ. ಕೃಷ್ಣಾ ರೆಡ್ಡಿ ಮೃತ ಸೈಕಲ್ ಸವಾರ. ಕುಮಾರಸ್ವಾಮಿ ಲೇಔಟ್​ ಕಡೆಯಿಂದ ಕತ್ರಿಗುಪ್ಪೆಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕೃಷ್ಣಾ ರೆಡ್ಡಿ ತಲೆ, ಮುಖಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು. ಈ ಕುರಿತು ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಖಾಸಗಿ ಬಸ್ ವಶಕ್ಕೆ ಪಡೆದಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 am, Fri, 18 August 23

ತಾಜಾ ಸುದ್ದಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್