ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ.

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ
ಆರೋಪಿ ತಂದೆ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2023 | 12:58 PM

ಬೆಂಗಳೂರು ಗ್ರಾಮಾಂತರ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುತ್ರ ಆದರ್ಶ್​(28) ಮೃತ ವ್ಯಕ್ತಿ. ಆದರ್ಶ್​ ದಿನವೂ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇತ್ತೀಚೆಗೆ ತಾಯಿಯ ಬಳಿ ಹಣ ಕೇಳಿದಾಗ ಕೊಡಲಿಲ್ಲವೆಂದು ಆಕೆಯ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಬೇಸತ್ತಿದ್ದ ತಂದೆ ಜಯರಾಮಯ್ಯ ನಿನ್ನೆ(ಜು.1) ರಾತ್ರಿ ಮಗನ ಕೈಕಾಲು ಕಟ್ಟಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಕುರಿಗಾಹಿ ಸಾವು

ದಾವಣಗೆರೆ: ನ್ಯಾಮತಿ‌‌ ತಾಲೂಕಿನ ಮರಿಗೊಡನಹಳ್ಳಿ ಗ್ರಾಮದ ಬಳಿಯ ಚೆಕ್​ಡ್ಯಾಮ್​ನಲ್ಲಿ ಈಜಲು ಹೋಗಿ ಬೆಳಗಾವಿ ಮೂಲದ ಕುರಿಗಾಹಿ ಬಾಲಕ ಬೀರಪ್ಪ(16) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯವರು, ಚೆಕ್​ಡ್ಯಾಮ್​ನಿಂದ ಮೃತ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಕಳ್ಳತನ ಮಾಡಿ ಜನರ ಕೈಯಿಗೆ ತಗ್ಲಾಕೊಂಡ ಕಳ್ಳ

ಕೊಪ್ಪಳ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವೇಳೆ ಕಳ್ಳರು ಜನರ ಕೈಯಿಗೆ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳದ ಭಾಗ್ಯನಗರ ವ್ಯಾಪ್ತಿಯ ನವನಗರದಲ್ಲಿ ನಡೆದಿದೆ. ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಜನರು ಹಿಡಿದು, ದೊಣ್ಣೆಯಿಂದ ಹೊಡೆದಿದ್ದಾರೆ. ಕೊನೆಗೆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್