ಚಿಕ್ಕಮಗಳೂರು: ಪತ್ನಿಯ ಬರ್ಬರ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದ ಪತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 05, 2023 | 7:51 PM

ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ನಡೆದಿದೆ. ಪತ್ನಿ ಶಮಭಾನು(34) ಕೊಲೆಯಾದವರು. ಇನ್ನು ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಪತ್ನಿಯ ಬರ್ಬರ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದ ಪತಿ
ಮೃತ ಮಹಿಳೆ
Follow us on

ಚಿಕ್ಕಮಗಳೂರು, ಸೆ.05: ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚಿಕ್ಕಮಗಳೂರು (Chikkamagalur) ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಪತಿ ಶಬ್ಬೀರ್ ಅಹ್ಮದ್. ಇತ ದೊಣ್ಣೆಯಿಂದ ಹೊಡೆದು ಪತ್ನಿ ಶಮಭಾನು(34) ಎಂಬುವವರನ್ನು ಕೊಲೆ ಮಾಡಿದ್ದಾನೆ. ಕಳೆದ ಒಂದು ವರ್ಷದ ಹಿಂದೆ ಶಮಭಾನು ಅವರನ್ನು ಶಬ್ಬೀರ್ ಮದ್ವೆಯಾಗಿದ್ದರು. ಇದೀಗ ದುರ್ಘಟನೆ ನಡೆದಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ-ತಂಗಿ ದುರ್ಮರಣ

ಬೆಳಗಾವಿ: ಜಿಲ್ಲೆಯ ನನದಿ ಗ್ರಾಮದ ಬಳಿ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲೇ ಸದಲಗಾ ನಿವಾಸಿಗಳಾದ ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ. ಪ್ರಶಾಂತ ತುಳಸಿಕಟ್ಟಿ(22), ಪ್ರಿಯಾಂಕಾ ತುಳಸಿಕಟ್ಟಿ (20) ಮೃತರು. ಬೆಳಗಾವಿಯಿಂದ ಸದಲಗಾದತ್ತ ತೆರಳುತ್ತಿದ್ದ ಕಾರು ಹಾಗೂ ಸದಲಗಾದಿಂದ ಚಿಕ್ಕೋಡಿಯತ್ತ ಆಗಮಿಸುತ್ತಿದ್ದ ದ್ವಿಚಕ್ರವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಣ್ಣ, ತಂಗಿ ಇಬ್ಬರನ್ನೂ ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಅಣ್ಣ ತಂಗಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Shivamogga crime news: ಹೆಂಡತಿಯ ಬರ್ಬರ ಹತ್ಯೆ ಮಾಡಿದ್ದ ಉರಗ ತಜ್ಞ: ಕಾರಣ ಆಸ್ತಿ ಅಲ್ಲ; ಮಹಿಳೆಯ ಅನೈತಿಕ ಸಂಬಂಧವಂತೆ

ಅಡ್ಡಾದಿಡ್ಡಿ ಕಾರು ಚಲಾಯಿಸಿದ ಭೂಪ; ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ತುಮಕೂರು: ಅಪರಿಚಿತನೊಬ್ಬ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಮೂರು ವಾಹನಗಳು ಜಖಂ ಆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಬಸ್ ನಿಲ್ದಾಣದ ಬಳಿ ನಡೆದಿದೆ. ಇನ್ನು ಇದೀಗ ಗಾಯಗೊಂಡ ವ್ಯಕ್ತಿಯನ್ನು ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇನ್ನು ಶಿರಾ ಕಡೆಯಿಂದ ಹುಳಿಯಾರು ಕಡೆಗೆ ಹೋಗುತ್ತಿದ್ದ ಕಾರನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿ ಅಪಘಾತ ಮಾಡಿದ್ದಾನೆ.

ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಯನ್ನು ಗುದ್ದಿಕೊಂಡು, ಅಲ್ಲೇ ಪಕ್ಕದಲ್ಲೇ ನಿಲ್ಲಿಸಿದ್ದ ಕಾರು ಮತ್ತು ಎರಡು ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಇನ್ನು ಚಾಲಕ ಕುಡಿತದ ಮತ್ತಿನಲ್ಲಿದ್ದ ಬಗ್ಗೆ ಅನುಮಾನ ಮೂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಶಿರಾ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ