ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ಕಂತೆ ಕಂತೆ ನೋಟುಗಳ ವಿಡಿಯೋ ನೋಡಿ ಹಣ ಕಳೆದುಕೊಂಡ ಜನ

| Updated By: Rakesh Nayak Manchi

Updated on: Feb 09, 2024 | 10:33 AM

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಎಂಬ ಲೇಡಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ಹಲವರಿಗೆ ವಂಚಿಸಿದ್ದಾಳೆ.

ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ; ಕಂತೆ ಕಂತೆ ನೋಟುಗಳ ವಿಡಿಯೋ ನೋಡಿ ಹಣ ಕಳೆದುಕೊಂಡ ಜನ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಆರ್​ಬಿಐ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಲೇಡಿ
Follow us on

ಆನೇಕಲ್, ಫೆ.9: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹಾಗೂ ಆರ್​ಬಿಐ (RBI) ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನಲ್ಲಿ ನಡೆದಿದೆ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಟ್ರಸ್​​ಗೆ ಆರ್​ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ; 60 ಜನರಿಗೆ 15 ಲಕ್ಷಕ್ಕೂ ಹೆಚ್ಚು ಹಣ ವಂಚಿಸಿದ ಗ್ಯಾಂಗ್ ಬಂಧನ

ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ.

ಆದರೆ, ಕೆಲವು ತಿಂಗಳಾದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ