AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು: ಮದುವೆ ಮನೆಯಲ್ಲಿ ನೀರವಮೌನ

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ಹೊರವಲಯದಲ್ಲಿ ನಡೆದಿದೆ.

ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು: ಮದುವೆ ಮನೆಯಲ್ಲಿ ನೀರವಮೌನ
ಮೃತ ಮದುಮಗ ಮಂಜುನಾಥ್
TV9 Web
| Edited By: |

Updated on:Feb 10, 2023 | 7:56 PM

Share

ಚಿತ್ರದುರ್ಗ: ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ (bridegroom) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಮೃತ ಮದುಮಗ. ಫೆಬ್ರುವರಿ 12ರಂದು ಮಂಜುನಾಥ್​ ಮದುವೆ ನಿಶ್ಚಯವಾಗಿತ್ತು. ನಾಯಕನಹಟ್ಟಿಯಿಂದ ಕಾಟಪ್ಪನಹಟ್ಟಿಗೆ ವಿವಾಹ ಆಮಂತ್ರಣ ಕೊಡಲು ತೆರಳುವಾಗ ದುರ್ಘಟನೆ ಸಂಭವಿಸಿದೆ. ಮದುವೆ ಮನೆಯಲ್ಲಿ ನೀರವಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ

ಮಂಡ್ಯ: ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಮಂಡ್ಯ ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ತಂದೆ ಸವಾರ ಸಾವನ್ನಪ್ಪಿದ್ದಾರೆ. ಉದಯ್ ಕುಮಾರ್ ಮೃತ ವ್ಯಕ್ತಿ. ಪತ್ನಿ ಮತ್ತು ಮಗನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುತ್ರ ದೀಕ್ಷಿತ್​ನ 7ನೇ ವರ್ಷದ ಹುಟ್ಟುಹಬ್ಬವಿದ್ದು, ಕೇಕ್ ತರಲು ಹೋಗಿದ್ದಾಗ ಘಟನೆ ನಡೆದಿದೆ. ಮೃತ ಉದಯ್ ಕುಮಾರ್ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸುತ್ತಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ದಲಿತ ಸಂಘಟನೆ ಒತ್ತಾಯ ಮಾಡಿದೆ. ಪರಿಹಾರ ನೀಡದಿದ್ರೆ ಡಿಸಿ ಕಚೇರಿ ಮುಂದೆ ಪ್ರತಿಭಟಿಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: “ನನ್ನ ಸಾವಿಗೆ ಯುವತಿ ಕಾರಣ”; ಬಿಯರ್ ಬಾಟಲ್​ನಿಂದ ತಲೆಗೆ ಚಚ್ಚಿಕೊಂಡು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೈಕ್ ಮತ್ತು ಬಸ್ ಮಧ್ಯೆ ಅಪಘಾತ: ಸವಾರ ಸ್ಥಳದಲ್ಲಿಯೇ ಸಾವು

ಧಾರವಾಡ: ಬೈಕ್ ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ತಿಪ್ಪನಗೌಡ ಮರಿಗೌಡರ್ (48) ಮೃತ ವ್ಯಕ್ತಿ. ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಅತ್ಯಾಚಾರಕ್ಕೆ ಯತ್ನ ಆರೋಪ, ಅವಳಿ ಸಹೋದರರ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಕ್ಯಾಂಟರ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ, ಯುವಕ ಸಾವು

ದೇವನಹಳ್ಳಿ: ಕ್ಯಾಂಟರ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ ಮತ್ತು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಭರತ್‌ ಹಾಗೂ ಯುವತಿ ಹೋಗುತ್ತಿದ್ದ ಬುಲೆಟ್ ಬೈಕ್​ ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಭರತ್ ಹಾಗೂ ಯುವತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಭರತ್ ಬೆಂಗಳೂರು ಮೂಲದವನಾಗಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ವಿಜಯಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 pm, Fri, 10 February 23

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ