ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ

ಲಾರಿ- ಬೈಕ್ ನಡುವೆ ಅಪಘಾತ ಸಂಭವುಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೋಮವಾರಪೇಟೆ ತಾಲೂಕಿನ ಮಾಲಂಬಿ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಅನ್ಯ ಧರ್ಮದ ಯುವತಿಯನ್ನ ಮದುವೆಯಾಗಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಕೊಲೆ
ಕೊಲೆಯಾದ ವ್ಯಕ್ತಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 04, 2022 | 8:19 AM

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡರುವಂತಹ ಘಟನೆ ನಡೆದಿದೆ. ನಗರದ ಪಿ.ಎನ್​.ಟಿ ಕ್ವಾಟರ್ಸ್ ಬಳಿ ಘಟನೆ ನಡೆದಿದ್ದು, ಪಿ.ಎನ್.ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿ. ಕೆಲ ತಿಂಗಳ ಹಿಂದೆ ಅನ್ಯ ಧರ್ಮದ ಯುವತಿಯನ್ನು ವಿವಾಹವಾಗಿದ್ದ ಪ್ರೀತಂ, ಇದೇ ಹಿನ್ನೆಲೆಯಲ್ಲಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಪ್ರೀತಂನನ್ನು ಪಾಲೋ ಮಾಡಿ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ-ಬೈಕ್​ ಮಧ್ಯೆ ಅಪಘಾತ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ:

ಕೊಡಗು: ಲಾರಿ- ಬೈಕ್ ನಡುವೆ ಅಪಘಾತ ಸಂಭವುಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೋಮವಾರಪೇಟೆ ತಾಲೂಕಿನ ಮಾಲಂಬಿ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೂಡುಮಂಗಳೂರಿನಿಂದ ಹಾಸನ ಜಿಲ್ಲೆಯ ಸಕಲೇಶಪುರದ ತಮ್ಮ ಮನೆಗೆ ತೆರಳುತ್ತಿರುವಾಗ ಕೊಡ್ಲಿಪೇಟೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಲಾರಿಯ ನಡುವೆ ಅಪಘಾತವಾಗಿದ್ದು, ಶೇಖರ್ (42) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,  ಪತ್ನಿಗೆ ಗಾಯಗೊಂಡಿದ್ದು, ಪುಟ್ಟ ಮಗು ಸೇಫಾಗಿದೆ. ಸದ್ಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ:

ಬೆಂಗಳೂರು: ರೇವಾ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ವಂಚಿಸಿದ್ದ ಪ್ರಕರಣಕ್ಕೆ  ಸಂಬಂಧಿಸಿದಂತ್ತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ (೨೪), ಚೇತನ್(೨೭) ಇಬ್ಬರೂ ಬಂಧಿತ ಆರೋಪಿಗಳಾಗಿದ್ದಾರೆ. ಜನವರಿ‌ ೨೮ ರಂದು ರಾಜೇಶ್ವರ್ ಎಂಬಾತನನ್ನು ಬಂಧಿಸಿದ್ದ ಪೊಲೀಸರು, ಅದೇ ಕೇಸ್​ನಲ್ಲಿ ಭಾಗಿಯಾಗಿದ್ದ ಒಟ್ಟು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ಸೀಟ್ ಕೊಡಿಸೋದಾಗಿ ಯುವತಿಗೆ ೧.೨೭ ಲಕ್ಷ ಹಣ ಪಡೆದು ವಂಚನೆ ಮಾಡಿದ್ರು. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಸಾಮಿಗಳು ಎಸ್ಕೇಪ್ ಆಗಿದ್ದರು. ಏರ್ ಟೆಲ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಹರ್ಷ ಮತ್ತು ಚೇತನ್, ಜನರನ್ನು ಮೋಸ ಮಾಡಲು ಇವರು ಮಾಡಿಕೊಳ್ತಿದ್ದ ಪ್ಲಾನ್ ಭಯಾನಕವಾಗಿತ್ತು.  ಸಿಮ್ ಖರೀದಿಸಲು ಬರುವವರ ಬಳಿ ಒಂದಕ್ಕಿಂತಿ ಹೆಚ್ಚು ಫಾರ್ಮ್ ಗೆ ಸಹಿ ಮಾಡಿಸಿಕೊಳ್ಳುತ್ತಿದ್ದರು, ಒಂದಕ್ಕಿಂತ ಹೆಚ್ಚು ಫೋಟೊ ಮತ್ತು ಒಂದಕ್ಕಿಂತ ಹೆಚ್ಚು ಬೆರಳು ಮುದ್ರೆ ಪಡೆದುಕೊಳ್ಳುತ್ತಿದ್ದರು. ಒಂದು ಸಿಮ್ ಕಾರ್ಡ್ ಗ್ರಾಹಕರಿಗೆ ನೀಡಿ, ಉಳಿದ ಸಿಮ್ ಕಾರ್ಡ್ ಸೈಬರ್ ವಂಚಕರಿಗೆ ಕೊಡುತ್ತಿದ್ದರು. ಈಶಾನ್ಯ ವಿಭಾಗ ಸಿಇಎನ್ ಪೊಲೀಸರ ಕಾರ್ಯಾಚರಣೆಯಿಂದ ಸದ್ಯ ಬಂಧಿತರಿಂದ ೭ ಲಕ್ಷ ನಗದು,೧೨೦ ಗ್ರಾಂ ಒಡವೆಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:

Petrol Diesel Rate Today: ಪ್ರಮುಖ ನಗರಗಳ ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

IND vs SL Test: ಇಂದಿನಿಂದ ಭಾರತ-ಶ್ರೀಲಂಕಾ ಮೊದಲ ಟೆಸ್ಟ್: ಮೊಹಾಲಿ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?

Published On - 8:04 am, Fri, 4 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ