Crime News: ವೈಯಕ್ತಿಕ ದ್ವೇಷದ ಹಿನ್ನಲೆ ಚಾಕುವಿನಿಂದ ಇರಿದು ಯುವಕನ ಕೊಲೆ

ಕೊಲೆ ಮಾಡಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಅಭಿಷೇಕ್​ನನ್ನು ಬಂಧಿಸಿಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Crime News: ವೈಯಕ್ತಿಕ ದ್ವೇಷದ ಹಿನ್ನಲೆ ಚಾಕುವಿನಿಂದ ಇರಿದು ಯುವಕನ ಕೊಲೆ
ಸಂಜಯ್, ಅಭಿಷೇಕ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 17, 2022 | 9:05 AM

ಚಾಮರಾಜನಗರ: ವೈಯಕ್ತಿಕ ದ್ವೇಷದ ಹಿನ್ನಲೆ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಅರಳೀಕಟ್ಟೆಬೀದಿ ನಿವಾಸಿ ಸಂಜಯ್ ಅಲಿಯಾಸ್ ಕೊತ್ತಿ(24) ಕೊಲೆಗೀಡಾದ ಯುವಕ. ಅಭಿಷೇಕ್ ಅಲಿಯಾಸ್ ಅಭಿ(22) ಕೊಲೆ ಮಾಡಿದ ಆರೋಪಿ. ಇತ್ತೀಚೆಗೆ ಪಟ್ಟಲದಮ್ಮ ಹಬ್ಬದ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ವೈಯಕ್ತಿಕ ದ್ವೇಷದ ಹಿನ್ನಲೆ ಕೊಲೆ ಆರೋಪ ಮಾಡಲಾಗಿದೆ. ಕೊಲೆ ಮಾಡಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಅಭಿಷೇಕ್​ನನ್ನು ಬಂಧಿಸಿಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರೈಲಿಗೆ ಸಿಲುಕಿ ವ್ಯಕ್ತಿ ಸಾವು:

ತುಮಕೂರು: ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವಂತಹ ಘಟನೆ ನಗರದ ತಾಲೂಕಿನ ಹೆಗ್ಗೆರೆ ಬಳಿ ನಡೆದಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಧಾರವಾಡದಲ್ಲಿ ಮದ್ಯದಂಗಡಿಗೆ ಕನ್ನ

ಧಾರವಾಡ: ಶಟರ್ ಮುರಿದು ಒಳನುಗ್ಗಿ ಕಳ್ಳರು ಮದ್ಯ ಕದ್ದಿರುವಂತಹ ಘಟನೆ ಹುಬ್ಬಳ್ಳಿ-ಧಾರವಾಡ ಮುಖ್ಯ ರಸ್ತೆಯಲ್ಲಿನ ಅಂಗಡಿಯೊಂದರಲ್ಲಿ ನಡೆದಿದೆ. ಧಾರವಾಡ ವಿದ್ಯಾಗಿರಿ ಬಡಾವಣೆಯಲ್ಲಿನ ಗ್ಯಾನ್ ಬಾ ಎಂಆರ್‌ಪಿ ಲಿಕ್ಕರ್ ಶಾಪ್‌ನಲ್ಲಿ ಕಳ್ಳತನ ಮಾಡಲಾಗಿದೆ. ನಿನ್ನೆ ಬೆಳಗಿನ ಜಾವ ನಡೆದ ಘಟನೆ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂದಾಜು 50 ಸಾವಿರ ರೂ. ಮೌಲ್ಯದ ಮದ್ಯ ಕಳ್ಳತನ ಮಾಡಲಾಗಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹಾಗೂ ಬೈಕ್ ಮುಖಾಮುಖಿ: ಸವಾರ ಸಾವು

ತುಮಕೂರು: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವಂತಹ ಘಟನೆ ನಗರದ ತಾಲೂಕಿನ ಅರಕೆರೆ ಬಳಿ ನಡೆದಿದೆ. ಬೈಕ್ ಸವಾರ ಜೈಪಾಲ್ 35 ಮೃತ ದುರ್ದೈವಿ. ಒಡಿಶಾ ಮೂಲದ ಜೈಪಾಲ್ ಬಿರನಕಲ್ಲು ಗ್ರಾಮದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಶಿಕ್ಷಕನಿಂದ ಲೈಂಗಿಕ ಕಿರುಕುಳ:

ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಳೆದ 10 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಚಂದ್ರಶೇಖರ್, ಮಾರ್ಚ್ 31 ರಂದು 2 ನೇ ತರಗತಿ ವಿದ್ಯಾರ್ಥಿನಿಗೆ ಲೈಗಿಂಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಇಂದು ಶಾಲೆ ಆರಂಭವಾದ ಹಿನ್ನಲೆ ಶಾಲೆಗೆ ಹೋಗಲು ಬಾಲಕಿ ನಕಾರ ಮಾಡಿದ ಕಾರಣ ವಿದ್ಯಾರ್ಥಿನಿ ಬಳಿ ಪೋಷಕರು ಏಕೆ ಶಾಲೆಗೆ ಹೋಗಲ್ಲ ಎಂದು ಕೇಳಿದಾಗ ಪೋಷಕರಿಗೆ ಮಗಳು ವಿಷಯ ತಿಳಿಸಿದ್ದಾಳೆ. ಸುದ್ದಿ ತಿಳಿದ ತಕ್ಷಣ ಕಿಕ್ಕೇರಿ ಪೊಲೀಸ್ ಠಾಣೆಗೆ ತೆರಳಿ ಪೋಷಕರು ದೂರು ನೀಡಿದ್ದಾರೆ. ಶಿಕ್ಷಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಬಿಇಓ ಬಸವರಾಜು ಶಿಕ್ಷಕನನ್ನು ಅಮಾನತು ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರದ ತುಂಡುಗಳು ಜಪ್ತಿ

ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರದ ತುಂಡುಗಳು ಜಪ್ತಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 12 ಲಕ್ಷ ಮೌಲ್ಯದ 2 ಲೋಡ್ ಅಕೇಶಿಯಾ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಗಲ್ನ ಎಂಪಿಎಂ ವ್ಯಾಪ್ತಿಯ ಅರಣ್ಯ ಸಿಬ್ಬಂದಿಯಿಂದಲೇ ಕೃತ್ಯ ನಡೆದಿದೆ. ಅರಣ್ಯ ಸಿಬ್ಬಂದಿ ಕೆ.ಮಂಜುನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 am, Tue, 17 May 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್