ಗದಗ: ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಬಯಲಾದ ಮಹಿಳೆಯ ಸಾವಿನ ರಹಸ್ಯ

ಗದಗದ ಸಾಯಿ ನಗರದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಅದರಂತೆ ಅಂತ್ಯಸಂಸ್ಕಾರ ನೆರವೇರಿಸಲು ಸಿದ್ಧತೆ ನಡೆಸುತ್ತಿದ್ದಾಗ ರಹಸ್ಯ ಬಯಲಾಗಿದೆ. ಗಂಡನ ಮನೆಯವರೇ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗದಗ: ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಬಯಲಾದ ಮಹಿಳೆಯ ಸಾವಿನ ರಹಸ್ಯ
ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಬಯಲಾದ ಮಹಿಳೆಯ ಸಾವಿನ ರಹಸ್ಯ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi

Updated on: Aug 13, 2023 | 2:59 PM

ಗದಗ, ಆಗಸ್ಟ್ 13: ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಗದಗ (Gadag) ಜಿಲ್ಲೆಯ ಸಾಯಿ ನಗರದಲ್ಲಿ ನಡೆದಿದೆ. ಸುದ್ದಿ ತಿಳಿದು ವಿದೇಶದಲ್ಲಿದ್ದ ಮೃತೆಯ ಪತಿ ಮನೆಗೆ ಆಗಮಿಸಿದ್ದಾರೆ. ಅದರಂತೆ ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸಲಾಗುತ್ತಿತ್ತು. ಇದಕ್ಕೂ ಮುನ್ನ ಮೃತದೇಹದ ಸ್ನಾನ ಮಾಡಿಸುವ ಕಾರ್ಯದ ವೇಳೆ ಮಹಿಳೆಯ ಕುಟುಂಬಸ್ಥರು ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿದ್ದು, ಅಂತ್ಯಸಂಸ್ಕಾರ ಕೈಬಿಟ್ಟು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹಸೀನಾ ಬೇಪಾರಿ ಅವರನ್ನು ಇಮ್ತಿಯಾಜ್ ಎಂಬಾತನೊಂದಿಗೆ 14 ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಇಮ್ತಿಯಾಜ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಇಂದು ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಮನೆಯವರು ಇಮ್ತಿಯಾಜ್​ಗೆ ತಿಳಿಸಿದ್ದಾರೆ. ಕೂಡಲೇ ಇಮ್ತಿಯಾಜ್ ವಿದೇಶದಿಂದ ಊರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಗದಗ: ಸಸ್ಪೆಂಡ್ ಆದ 15 ದಿನಗಳಲ್ಲಿ ಮುಖ್ಯಾಧಿಕಾರಿಯಾಗಿ ಬಡ್ತಿ ನೀಡಿದ ಸರ್ಕಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗೆ ಸರ್ಕಾರದ ರಕ್ಷಣೆಯೆಂದು ಜನರ ಆಕ್ರೋಶ

ಮಹಿಳೆಯ ಕುಟುಂಬಸ್ಥರಿಗೂ ಕುಸಿದು ಬಿದ್ದು ಸಾವನ್ನಪ್ಪಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ದೌಡಾಯಿಸಿದ ಮೃತೆಯ ಕುಟುಂಬಸ್ಥರು ಸೇರಿದಂತೆ ಎಲ್ಲರೂ ದುಃಖದ ನಡುವೆ ಹಸೀನಾಳಾ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳನ್ನು ನಡೆಸುತ್ತಿದ್ದರು. ಈ ನಡುವೆ ಮೃತದೇಹವನ್ನು ಸ್ನಾನ ಮಾಡಿಸುವ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ.

ಮೃತದೇಹವನ್ನು ಸ್ನಾನ ಮಾಡಿಸುವಾಗ ಮಹಿಳೆ ಕತ್ತಿನ ಭಾಗದಲ್ಲಿ ಹಗ್ಗದಿಂದ ಬಿಗಿದಿರುವ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಹೆಬ್ಬೆಟ್ಟು ಹಾಕಿಸಿದ ಗುರುತು ಕೂಡ ಕಾಣಿಸಿದೆ. ಇದರಿಂದ ಅನುಮಾನಗೊಂಡ ಮಹಿಳೆಯ ಕುಟುಂಬಸ್ಥರು, ಅತ್ತೆ, ನಾದನಿ, ಬಾವ ಮೈದುನ ಸೇರಿಕೊಂಡು ಹಸೀನಾಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅಂತ್ಯಸಂಸ್ಕಾರ ಕೈಬಿಟ್ಟು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ಮಗಳನ್ನು ಆಕೆಯ ಪತಿಯ ಮನೆಯವರು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗದಗ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?