Bangalore Crime: ಮನೆ ಕಳವು ಮಾಡುತ್ತಿದ್ದ ಆರೋಪಿಗಳು ಪೊಲೀಸರ ವಶಕ್ಕೆ

ಬೆಂಗಳೂರಿನಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಮ್ ಬಹದ್ದೂರ್ ಬಿಸ್ವಾಕರ್ಮ(48), ಕಮಲ್ ರಾಜ್ ಬಿಸ್ವಾಕರ್ಮ(20) ಬಂಧಿತ ಆರೋಪಿಗಳಾಗಿದ್ದಾರೆ.

Bangalore Crime: ಮನೆ ಕಳವು ಮಾಡುತ್ತಿದ್ದ ಆರೋಪಿಗಳು ಪೊಲೀಸರ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: ganapathi bhat

Updated on: Apr 16, 2021 | 10:30 PM

ಬೆಂಗಳೂರು: ವೈಟ್ ಫೀಲ್ಡ್ ಪೊಲೀಸರ ಕಾರ್ಯಾಚರಣೆಯಿಂದಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ರಾಮ್ ಬಹದ್ದೂರ್ ಬಿಸ್ವಾಕರ್ಮ(48), ಕಮಲ್ ರಾಜ್ ಬಿಸ್ವಾಕರ್ಮ(20) ಬಂಧಿತ ಆರೋಪಿಗಳಾಗಿದ್ದಾರೆ. ನೇಪಾಳದಿಂದ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಗಾರ್ಡ್​ಗಳಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇವರು ರಾತ್ರಿ ವೇಳೆ ಮನೆಗಳ್ಳತನ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು. ಬಂಧಿತರಿಂದ 2 ಲಕ್ಷ ‌ಮೌಲ್ಯದ ಚಿನ್ನಾಭರಣ 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ನೆಲಮಂಗಲ; ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಮನೆ ಕಳವು ಮಾಡುತ್ತಿದ್ದ ಸಿದ್ದಪ್ಪ ಬಿ.ಕೆ ಎಂಬ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 20 ಲಕ್ಷ ಮೌಲ್ಯದ ಚಿನ್ನ, ಒಂದು ಇನೊವಾ ಕಾರ್ ಮತ್ತು ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

ಕಳ್ಳರು ಬಾಗಲಗುಂಟೆಯ ಉಷಾ ಎಂಬುವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದರು. ಸ್ನೇಹಿತೆಯನ್ನು ಮಾತನಾಡಿಸುವ ನೆಪದಲ್ಲಿ ಮನೆಗೆ ಹೋಗಿ ಕಳ್ಳತನ ಮಾಡುತ್ತಿದ್ದರು. ಮನೆಯಾಕೆ ಉಷಾ, ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಷ್ಟರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕುರಿತಂತೆ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ತನಿಖೆಯ ಮೂಲಕ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಈ ಹಿಂದೆ ಬಾಡಿಗೆಗೆ ಕಾರು ಪಡೆದು, ಬಾಡಿಗೆ ನೀಡದೆ ಅದೇ ಕಾರು ಮತ್ತು ಬೈಕ್ ಕಳ್ಳತನ ಮಾಡಿದ್ದರು. ಯಲಹಂಕ ಠಾಣ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಬೆಂಗಳೂರು ವಲಯದ ಎನ್‌ಸಿಬಿ ಕಾರ್ಯಾಚರಣೆ; ಪಾರ್ಸೆಲ್‌ನಲ್ಲಿ ಅಡಗಿಸಿಟ್ಟಿದ್ದ 20 ಲಕ್ಷ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು ವಲಯದ ಎನ್‌ಸಿಬಿ ಕಾರ್ಯಾಚರಣೆಯಲ್ಲಿ ಪಾರ್ಸಲ್​ನಲ್ಲಿ ಅಡಗಿಸಿಟ್ಟಿದ್ದ 20 ಲಕ್ಷ ಮೌಲ್ಯದ ಆ್ಯಂಪಟಮೈನ್ ಮಾದಕವನ್ನು ವಶಕ್ಕೆ‌ ಪಡೆಯಲಾಗಿದೆ. ಡ್ರಗ್​ನ್ನು ಅಂತರಾಷ್ಟ್ರೀಯ ಪಾರ್ಸಲ್ ವ್ಯವಸ್ಥೆ ಮೂಲಕ ಕಳಿಸಲಾಗುತ್ತಿತ್ತು. ಕ್ರಿಕೆಟ್ ಕಿಟ್​ನಲ್ಲಿ ಅಡಗಿಸಿಟ್ಟು ಕತಾರ್‌ನ ದೋಹಾ ವಿಳಾಸಕ್ಕೆ ಕಾಸರಗೋಡು ಮೂಲದ ನಶಾತ್ ಎಂಬಾತನಿಂದ ಪಾರ್ಸಲ್ ಕಳಿಸಲಾಗಿತ್ತು.

ಇದನ್ನೂ ಓದಿ: Bangalore Crime: ಟಿವಿ ನೋಡುವ ವಿಷಯಕ್ಕೆ ದಂಪತಿ ಜಗಳ: ಮೂರು ವರ್ಷದ ಮಗಳನ್ನೇ ಕೊಂದ ತಾಯಿ

Bangalore Crime: ಬನಶಂಕರಿ 6ನೇ ಹಂತದ ಚಿಕ್ಕೇಗೌಡನಪಾಳ್ಯದ ಬಳಿ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್