
ಬೆಂಗಳೂರು: ಚಿನ್ನಕ್ಕಾಗಿ ಮಹಿಳೆಯ ಮೇಲೆ ಹಲ್ಲೆ ಮಾಡಿ, ಆಕೆಯ ಮಗುವನ್ನು ಹತ್ಯೆ ಮಾಡಿದ ಘಟನೆ ಗಂಗಾನಗರದಲ್ಲಿ ನಡೆದಿದೆ. ಹನುಮಂತಮ್ಮ ತೀವ್ರವಾಗಿ ಗಾಯಗೊಂಡಿದ್ದು, ಪುತ್ರ ರಾಜ (12) ಮೃತಪಟ್ಟಿದ್ದಾನೆ.
ಲಿಂಗಪ್ಪ ಎಂಬಾತ ಕೃತ್ಯ ಎಸಗಿದ್ದು, ಆತನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ಡಿ.16ರಂದು ಹನುಮಂತಮ್ಮನವರ ಮನೆಯಲ್ಲಿದ್ದ 30 ಗ್ರಾಂ. ಚಿನ್ನ ಕಳವು ಮಾಡಲು ಯತ್ನಿಸಿದ್ದಾನೆ. ನಂತರ ಅಲ್ಲಿಂದ ತಪ್ಪಿಸಿಕೊಳ್ಳುವಾಗ ತಾಯಿ ಮತ್ತು ಮಗನ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ.
ಸ್ಥಳದ ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಮಗ ರಾಜ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಹನುಮಂತಮ್ಮ ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಗಾದಿ ಲಿಂಗಪ್ಪ ಹತ್ಯೆ ಮಾಡಿದ ಬಳಿಕ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯವನ್ನು ಆಧರಿಸಿ ಪೊಲೀಸರು ಲಿಂಗಪ್ಪನನ್ನು ಬಂಧಿಸಿದ್ದಾರೆ ಮತ್ತು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಆರೋಪಿ ಲಿಂಗಪ್ಪ ಮನೆಯಿಂದ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Published On - 11:44 am, Sat, 19 December 20