Crime News: ಸೊಸೆಯ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ!
Suicide News Today | ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ.
ಲುದಿಯಾನ: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಆದರೆ, ಪಂಜಾಬ್ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.
ಸೊಸೆ ಹಾಗೂ ಆಕೆಯ ತವರು ಮನೆಯವರ ಕಾಟ ತಾಳಲಾರದೆ ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಅಪರೂಪದ ಘಟನೆ ಲುಧಿಯಾನದಲ್ಲಿ ನಡೆದಿದೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ, ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಅಲ್ಲದೆ, ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ.
ಸೊಸೆಯ ಮನೆಯವರು ಬ್ಲಾಕ್ಮೇಲ್ ಮಾಡಿದ್ದರಿಂದ ನೊಂದಿದ್ದ ಆ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು. ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. ಅವರಿಗೆ 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ಸೊಸೆಯ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು.
ಇದನ್ನೂ ಓದಿ: Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ
Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ
(Crime News: Threatened with fake dowry harassment case by Daughter-in-Law 60-year-old man sets himself ablaze)