Vijayapura News: ಭೀಮಾತೀರದಲ್ಲಿ ರೌಡಿಶೀಟರ್ ಹತ್ಯೆಗೈದಿದ್ದ ಮೂವರು ಆರೋಪಿಗಳ ಬಂಧನ

ಭೀಮಾತೀರದಲ್ಲಿ ರೌಡಿಶೀಟರ್ ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಆಲಮೇಲ‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijayapura News: ಭೀಮಾತೀರದಲ್ಲಿ ರೌಡಿಶೀಟರ್ ಹತ್ಯೆಗೈದಿದ್ದ ಮೂವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Jul 17, 2023 | 9:58 AM

ವಿಜಯಪುರ: ಭೀಮಾತೀರದಲ್ಲಿ ರೌಡಿಶೀಟರ್ (Rowdy Sheeter) ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಆಲಮೇಲ‌ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಜನಿವಾರ, ಅನ್ವರ್ ನದಾಫ್, ಸಂತೋಷ್ ಬಂಧಿತ ಆರೋಪಿಗಳು. ಆರೋಪಿಗಳು ಜು.11ರಂದು ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ರೌಡಿಶೀಟರ್​ ಮಾಳಪ್ಪ ಮೇತ್ರಿ(45) ಕೊಲೆಗೈದಿದ್ದರು. ಆಲಮೇಲ‌ ನಿವಾಸಿ ರೌಡಿಶೀಟರ್ ಮಾಳಪ್ಪ ಮೇತ್ರಿಯನ್ನು ಮೂವರು ಮಾರಕಾಸ್ತ್ರದಿಂದ ಕೊಚ್ಚಿ, ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದರು.

ಜಿಂಕೆ ಕೊಂದು ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಚಾಮರಾಜನಗರ: ಜಿಂಕೆಯನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಸಿದ್ದಾರೆ. ಜಲ್ಲಿಪಾಳ್ಯದ ರಾಜು ಅಲಿಯಾಸ್ ಕೋಲಕಾರ್ ರಾಜು ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಜಲ್ಲಿಪಾಳ್ಯದಲ್ಲಿರುವ ಆರೋಪಿ ಮನೆ ಮೇಲೆ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ

ಈ ವೇಳೆ ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಜಿಂಕೆ ಮಾಂಸ, ಚರ್ಮ, ಎರಡು ಒಂಟಿ ನಳಿಕೆ ಬಂದೂಕುಳು, ಮಚ್ಚು, ಚೂರಿ ಪತ್ತೆಯಾಗಿವೆ. ಆರೋಪಿ ರಾಜುವನ್ನು ಅರಣ್ಯಾಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೈಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೈಸಾಲ ವಾಪಸ್ ನೀಡುವಂತೆ ಸ್ನೇಹಿತ ಕೇಳಿದ್ದಕ್ಕೆ ಡೆತ್​ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. ಹೆಚ್.ಕೆ.ಪೃಥ್ವಿರಾಜ್(26) ಮೃತ ಯುವಕ.

ಪೃಥ್ವಿರಾಜ್​ಗೆ ಸಾಲ ನೀಡಿದ್ದ ಸ್ನೇಹಿತ ಬಡ್ಡಿ ಸಮೇತ ಕೈಸಾಲ ವಾಪಸ್ ನೀಡುವಂತೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Mon, 17 July 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us