AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಮೂವರ ಸಾವು

ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

Crime News: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಮೂವರ ಸಾವು
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಮೂವರ ಸಾವು
TV9 Web
| Edited By: ಆಯೇಷಾ ಬಾನು|

Updated on:Aug 20, 2022 | 8:09 AM

Share

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಿನಾಶ್(28), ಪ್ರಣಂತಿ(5), ಸೌಖ್ಯಾ(3) ಮೃತ ದುರ್ದೈವಿಗಳು.

ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಶವಂತಪುರ ಫ್ಲೈಓವರ್ ಮೇಲೆ ಆ್ಯಕ್ಸಿಡೆಂಟ್

ಬೆಂಗಳೂರಿನ ಯಶವಂತಪುರ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದೆ. 2 ಕಾರುಗಳು ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಯಶವಂತಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋವಿಡ್ನಲ್ಲಿ ಕೆಲಸ ಹೋಯ್ತು ಅಂತ ಕಳ್ಳತನ ದಾರಿ

ಕೋವಿಡ್ನಲ್ಲಿ ಕೆಲಸ ಹೋಯ್ತು ಎಂದು ಹಣ ಮಾಡಲು ಕಳ್ಳತನ ದಾರಿ ಹಿಡಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಫ್ಲೈಟ್ ನಲ್ಲಿ ಬಂದು ಚಿನ್ನ ಕಳವು ಮಾಡ್ತಿದ್ದ ಚಾಲಾಕಿ ಕಳ್ಳ ರಾಹುಲ್ ಯಾದವ್ ಬಂಧಿತ ಆರೋಪಿ.

ಬಿಎಸ್ಸಿ ಪದವೀಧರನಾಗಿರುವ ರಾಹುಲ್ ಆಗಾಗ ಬೆಂಗಳೂರಿಗೆ ಬಂದು ಚಿನ್ನದ ಅಂಗಡಿಗಳಲ್ಲಿ ಕಳ್ಳತನ ಮಾಡ್ತಿದ್ದ. ದೆಹಲಿಗಿಂತ ಬೆಂಗಳೂರಿನಲ್ಲಿ ಕಳ್ಳತನ ಮಾಡೋದು ಸುಲಭ ಅಂತ ಇಲ್ಲಿಗೆ ಬರ್ತಿದ್ದ. ಚಿನ್ನ ಕಳವು ಮಾಡ್ತಿದಂತೆ ದೆಹಲಿ ಫ್ಲೈಟ್ ಹತ್ತಿ ವಾಪಸ್ ಆಗುತ್ತಿದ್ದ. ಕದ್ದ ಚಿನ್ನವನ್ನು ದೆಹಲಿಯಲ್ಲಿ ಮಾರಿ ತನ್ನ ಪತ್ನಿಯ ಅಕೌಂಟ್ ಗೆ ಹಣ ಹಾಕ್ತಿದ್ದ. ಕಡಿಮೆ ಜನ ಹಾಗೂ ಒಬ್ಬರೇ ಸೇಲ್ಸ್ ಬಾಯ್ ಇರುವ ಚಿನ್ನದ ಅಂಗಡಿಗಳನ್ನೇ ಹೆಚ್ಚಾಗಿ ಈಗ ಟಾರ್ಗೆಟ್ ಮಾಡ್ತಿದ್ದ. ಚಿನ್ನ ಖರೀದಿಸುವ ನೆಪದದಲ್ಲಿ ಗ್ರಾಹಕನಂತೆ ನಟಿಸಿ ಅಂಗಡಿಯವರ ಗಮನ ಬೇರೆಡೆ ಸೆಳೆದು ಚಿನ್ನ ಕದ್ದು ಪರಾರಿಯಾಗ್ತಿದ್ದ. ಬೆಂಗಳೂರಿನ ಜಯನಗರ ಹಾಗೂ ಮಲ್ಲೇಶ್ವರದಲ್ಲಿನ ಅಂಗಡಿಗಳಲ್ಲಿ 230 ಗ್ರಾಂ ಚಿನ್ನ ಕಳವು ಮಾಡಿದ್ದ. ಆರೋಪಿ ಕಳವು ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಸಹಾಯದಿಂದ ಪೊಲೀಸರು ಖದೀಮನನ್ನು ಹಿಡಿದಿದ್ದಾರೆ. ಬಂಧಿತನಿಂದ 120 ಗ್ರಾಂ ಚಿನ್ನ ಹಾಗೂ 7 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.

Published On - 8:09 am, Sat, 20 August 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್