ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ

Mangaluru News: ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ.

ಎಂಡಿಎಂಎ ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ
ಜಪ್ತಿ ಮಾಡಿರುವ ಎಂಡಿಎಂಎ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Aug 13, 2023 | 9:06 PM

ಮಂಗಳೂರು, ಆಗಸ್ಟ್​ 13: ಎಂಡಿಎಂಎ (MDMA) ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದು, 9 ಲಕ್ಷ ರೂಪಾಯಿ ಮೌಲ್ಯದ 170 ಗ್ರಾಂ ಎಂಡಿಎಂಎ, ರಿಟ್ಜ್ ಕಾರು, 6 ಮೊಬೈಲ್, ಡಿಜಿಟಲ್ ಮಾಪಕ ವಶಕ್ಕೆ ಪಡೆಯಲಾಗಿದೆ. ಮೂಡುಶೆಡ್ಡೆಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್,​ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜತ್ ಖಾನ್ ಬಂಧಿತರು. ಬೆಂಗಳೂರಿನಲ್ಲಿ MDMA ಖರೀದಿಸಿ ಮಂಗಳೂರಿಗೆ ತಂದಿದ್ದು, ಬೊಂದೆಲ್ ಪಡುಶೆಡ್ಡೆ ಪ್ರದೇಶದಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ.

ಡ್ರಗ್ಸ್​ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಕ್ರಿಮಿನಲ್ ಹಿನ್ನೆಲೆಯ ಇಮ್ರಾನ್ ವಿರುದ್ಧ ಈಗಾಗಲೇ 9 ಕೇಸ್ ಇದೆ. ವಾರದ ಹಿಂದಷ್ಟೇ ಜಾಮೀನಿನ ಮೇಲೆ ಜೈಲ್​ನಿಂದ ಹೊರಬಂದಿದ್ದ. ಡ್ರಗ್ಸ್​ ಜಪ್ತಿ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಾವರ ಬಳಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಹಾಸನ: ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, 14 ಕೆಜಿ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಲತೇಶ್ @ ಅನಿಲ್ (28) ಬಂಧಿತ ಆರೋಪಿ. ಶುಂಠಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಸುಮಾರು ನಾಲ್ಕು ತಿಂಗಳ ಹಿಂದೆ ಶುಂಠಿ ಬೆಳೆಯಲು ಐವತ್ತು ಸಾವಿರ ರೂಗೆ ಜಮೀನು ಪಡೆದಿದ್ದ.

ಇದನ್ನೂ ಓದಿ: ಮಂಗಳೂರು: ನೈತಿಕ ಪೊಲೀಸ್‌ಗಿರಿ ಪ್ರಕರಣ: ಓರ್ವ ಶಂಕಿತ ವ್ಯಕ್ತಿಯ ಬಂಧನ

ಮತ್ತಾವರ ಗ್ರಾಮದ ಕುಮಾರಸ್ವಾಮಿ ಅವರಿಂದ ಗುತ್ತಿಗೆಗೆ ಜಮೀನು ಪಡೆದಿದ್ದ ಲತೇಶ್, ಮಾಲೀಕರಿಗೆ ವಂಚಿಸಿ ಶುಂಠಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಸೊಪ್ಪು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ

ಯಾದಗಿರಿ: ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಿದ್ದ ಯುವಕ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿ ನಡೆದಿದೆ. ಶಹಾಪುರ ತಾಲೂಕಿನ ಕನ್ಯಾಕೋಳೂರಿನ ರವಿಕಿರಣ್(22) ಮೃತ ವ್ಯಕ್ತಿ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಮೌನೇಶ್ವರ ದೇಗುಲಕ್ಕೆ ಕುಟುಂಬ ಸಮೇತ ಬಂದಿದ್ದಾಗ ಘಟನೆ ಸಂಭವಿಸಿದೆ.​​​ ಘಟನಾ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ