ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ. ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್
Image Credit source: NDTV

Updated on: Sep 22, 2023 | 7:52 AM

ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ.
ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅತ್ಯಾಚಾರ ಮಾಡುವ ಮೊದಲು ಆರೋಪಿಗಳು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ಆರೋಪಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಕೊಲೆಗೆ ಯತ್ನ: ಅದೃಷ್ಟವಶಾತ್​ ಪಾರಾದ ಇಬ್ಬರು ಯುವಕರು, ಬಂಧನ

ದಾಳಿಕೋರರು ಮನೆಗೆ ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಈ ಘಟನೆಯಲ್ಲಿ ಅದೇ ಆರೋಪಿಗಳು ಭಾಗಿಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯಿಂದ ಸ್ವಲ್ಪ ನಗದು ಮತ್ತು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ. ಎರಡೂ ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪಾಣಿಪತ್‌ನ ಮಟ್ಲೌಡಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ವಿಜಯ್ ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us