AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore: ಮಂಗಳೂರಿನಲ್ಲಿ ಆ್ಯಪ್ ಬಳಸಿ ವಂಚಿಸುತ್ತಿದ್ದ ಟಿಬೆಟ್ ಪ್ರಜೆಗಳ ಬಂಧನ, ಶಿಕಾರಿಪುರದಲ್ಲಿ ಹಸುಗೂಸಿನ ಮೇಲೆ ಅತ್ಯಾಚಾರ

Mangalore Crime News: ಕ್ರೆಡಿಟ್ ಕಾರ್ಡ್ ಕ್ಯಾನ್ಸಲೇಶನ್ ಮಾಡಿಸಲು ಮನವಿ ಮಾಡಿದವರಿಗೆ ಕರೆ ಮಾಡುತ್ತಿದ್ದವರಿಗೆ ಕ್ಯಾನ್ಸಲೇಷನ್​ಗೆ ಒಟಿಪಿ ಬರುತ್ತೆ, ಅದನ್ನು ಹೇಳಿ ಎಂದು ಕೇಳುತ್ತಿದ್ದರು.

Mangalore: ಮಂಗಳೂರಿನಲ್ಲಿ ಆ್ಯಪ್ ಬಳಸಿ ವಂಚಿಸುತ್ತಿದ್ದ ಟಿಬೆಟ್ ಪ್ರಜೆಗಳ ಬಂಧನ, ಶಿಕಾರಿಪುರದಲ್ಲಿ ಹಸುಗೂಸಿನ ಮೇಲೆ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 11, 2021 | 4:39 PM

Share

Mangalore Crime News | ಮಂಗಳೂರು: ನಿಷೇಧಿತ ಚೀನಾ ಆ್ಯಪ್ ಹಣ ಲಪಟಾಯಿಸುತ್ತಿದ್ದ ಇಬ್ಬರು ಟಿಬೆಟ್ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಲೋಬಸಂಗ್ ಸಂಗ್ಯೆ (24), ದಪಕ ಪುಂದೇ (44) ಬಂಧಿತರು. ಮುಂಡಗೋಡು ಟಿಬೇಟಿಯನ್ ಕ್ಯಾಂಪ್ ನಿವಾಸಿಗಳಾದ ಇವರು, ಮೊಬಿವಿಕ್, ವೀಚಾಟ್ ಮತ್ತು ರೆಡ್​ಪ್ಯಾಕ್ ಆ್ಯಪ್​ ಬಳಸಿ ವಂಚಿಸುತ್ತಿದ್ದರು. ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದವರನ್ನು ಗುರಿಯಾಗಿಸಿಕೊಂಡು ವಂಚನೆ ಮಾಡುತ್ತಿದ್ದರು. ಕ್ರೆಡಿಟ್ ಕಾರ್ಡ್ ಕ್ಯಾನ್ಸಲೇಶನ್ ಮಾಡಿಸಲು ಮನವಿ ಮಾಡಿದವರಿಗೆ ಕರೆ ಮಾಡುತ್ತಿದ್ದವರಿಗೆ ಕ್ಯಾನ್ಸಲೇಷನ್​ಗೆ ಒಟಿಪಿ ಬರುತ್ತೆ, ಅದನ್ನು ಹೇಳಿ ಎಂದು ಕೇಳುತ್ತಿದ್ದರು. ಇದೇ ರೀತಿ ಅತ್ತಾವರದ ಅಲೆಕ್ಸಾಂಡರ್ ಎಂಬುವವರ ಅಕೌಂಟ್​ನಿಂದ 1,12,000 ಹಣ ವರ್ಗಾವಣೆ ಮಾಡಿಕೊಂಡಿದ್ದರು. ಉತ್ತರ ಪ್ರದೇಶ, ಮಹಾರಾಷ್ಟ್ರ ಮೂಲದ ಹಲವು ಅಕೌಂಟ್​ಗಳಿಂದಲೂ ಹಣ ವರ್ಗಾವಣೆ ಮಾಡಿಕೊಂಡಿದ್ದರು. ಭಾರತದ ಕರೆನ್ಸಿಯನ್ನು ಚೀನಾ ಕರೆನ್ಸಿಗೆ ವಿನಿಮಯ ಮಾಡಿಕೊಡಲು ಮತ್ತೊಂದು ತಂಡ ನೆರವಾಗುತ್ತಿತ್ತು. ಈ ತಂಡಕ್ಕೆ ಚೀನಾ ಅಧಿಕಾರಿಗಳ ಬೆಂಬಲವೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಗುಪ್ತಚರ ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂರು ವರ್ಷದ ಮಗು ಮೇಲೆ ಅತ್ಯಾಚಾರ ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 3 ವರ್ಷದ ಮಗುವಿನ ಮೇಲೆ ಪರಿಚಿತ ಯುವಕನೇ ಅತ್ಯಾಚಾರ ಎಸಗಿದ್ದಾನೆ. ಟಿವಿ ತೋರಿಸುವ ಆಮಿಷವೊಡ್ಡಿ ಮಗುವಿನ ಮೇಲೆ ನೆರೆ ಮನೆ ಯುವಕ ಈ ನೀಚ ಕೃತ್ಯ ಎಸಗಿದ್ದಾನೆ. ಮಗುವಿಗೆ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಪೋಷಕರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರಣಿ ವೇಳೆ ಜಮೀನು ಮಾಲೀಕ ಆತ್ಮಹತ್ಯೆಗೆ ಯತ್ನ ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದಲ್ಲಿ ಜಮೀನು ಮಾಲೀಕ ಆಕಾಶ್‌ ಮೈಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಇತರ ಪ್ರತಿಭಟನಾ ನಿರತ ರೈತರು ತಕ್ಷಣ ಆಕಾಶ್ ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದರು. ಸಮೀಕ್ಷೆಯಲ್ಲಿ ಗುರುತಿಸಿರುವ ಜಮೀನು ಬಿಟ್ಟು ಬೇರೆ ಜಮೀನಿನಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ, ಫಲವತ್ತಾದ ಜಮೀನು ನಾವು ಬಿಟ್ಟುಕೊಡುವುದಿಲ್ಲ ಎಂದು ರೈತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೀವ ಕೊಟ್ಟೇವು ಜಮೀನು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ನೂರಾರು ಪೊಲೀಸರನ್ನು ಕರೆತಂದು ಕಾಮಗಾರಿ ಮುಂದುವರಿಸಿದ ಹಿನ್ನೆಲೆಯಲ್ಲಿ ಕೈಲಿ ಕುಡುಗೋಲು ಹಿಡಿದು ರೈತರು ಆತ್ಮಹತ್ಯೆಗೆ ಯತ್ನಿಸಿದರು. 15ಕ್ಕೂ ಹೆಚ್ಚು ಧರಣಿನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ ! ಇದನ್ನೂ ಓದಿ: ವಿವಾಹ ಪೂರ್ವ ಅತ್ಯಾಚಾರ ಆರೋಪ; ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಕಿರುತೆರೆ ನಟಿ

Published On - 4:18 pm, Thu, 11 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ