AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿವೇಷ ತಂಡದ ಮುಖ್ಯಸ್ಥನ ಹತ್ಯೆಗೆ ಪ್ರತೀಕಾರಕ್ಕೆ ಸ್ಕೆಚ್​: ನಾಲ್ವರು ಪೊಲೀಸ್ ವಶಕ್ಕೆ

ಕಳೆದ ನವೆಂಬರ್ 6, 2023 ರಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಲ್ಲೇಗದಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26)ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಜೊತೆಗೆ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಪ್ರತಿಕಾರ ತಿರಿಸಿಕೊಳ್ಳುವ ಸಲುಹುವಾಗಿ ಪ್ಲ್ಯಾನ್ ಮಾಡಿದ್ದ ನಾಲ್ವರನ್ನು ಪುತ್ತೂರು(Puttur) ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಲಿವೇಷ ತಂಡದ ಮುಖ್ಯಸ್ಥನ ಹತ್ಯೆಗೆ ಪ್ರತೀಕಾರಕ್ಕೆ ಸ್ಕೆಚ್​: ನಾಲ್ವರು ಪೊಲೀಸ್ ವಶಕ್ಕೆ
ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ; ನಾಲ್ವರು ಅರೆಸ್ಟ್​
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 21, 2024 | 2:37 PM

Share

ದಕ್ಷಿಣ ಕನ್ನಡ, ಫೆ.21: ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳುವ ಸಲುಹುವಾಗಿ ಪ್ಲ್ಯಾನ್ ಮಾಡಿದ್ದ ನಾಲ್ವರನ್ನು ಪುತ್ತೂರು(Puttur) ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ನಿವಾಸಿ ಕಿಶೋರ್‌ ಕಲ್ಲಡ್ಕ (36), ಪುತ್ತೂರಿನ ಮನೋಜ್‌ (23), ಆಶಿಕ್‌ (28) ಹಾಗೂ ಸನತ್‌ ಕುಮಾರ್‌ (24) ಎಂಬುವವರು ಬಂಧಿತರು. ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳಲು ಹತ್ಯೆಯ ಆರೋಪಿ ಮನೀಶ್ ಸಹೋದರ ಮನೋಜ್​ ಎಂಬುವವರಿಗೆ ಬೆದರಿಕೆ ಕರೆ ಮಾಡಿದ್ದರು. ಈ ಹಿನ್ನಲೆ ಮನೋಜ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.

‘ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ. ಆದ್ರೆ, ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿದ್ದರು. ಬಳಿಕ ಮನೋಜ್ ಚಲನವಲನವನ್ನ ದುಷ್ಕರ್ಮಿಗಳ ತಂಡ ಗಮನಿಸುತ್ತಿದ್ದರು. ಅದರಂತೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳ ತಂಡ ತಲ್ವಾರ್ ಸಹಿತ ಅವಿತ್ತಿದ್ದರು.  ಸದ್ಯ ಕಾರು, ತಲ್ವಾರ್ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಆರ್ಮ್ಸ್ ಆ್ಯಕ್ಟ್ ಅಡಿ‌ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ಘಟನೆ ವಿವರ

ಕಳೆದ ನವೆಂಬರ್ 6, 2023 ರಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಲ್ಲೇಗದಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26)ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಬನ್ನೂರು ನಿವಾಸಿ ಮನೀಷ್, ಚೇತು, ಮಂಜ, ಕೇಶವ ಎಂಬವವರನ್ನು ಬಂಧಿಸಿದ್ದರು. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಸಧ್ಯ ಹತ್ಯೆ ಪ್ರಕರಣ ಸಂಬಂಧ ಚೇತನ್, ಮನೀಶ್, ಮಂಜ, ಕೇಶವ ಪಡೀಲು ನ್ಯಾಯಾಂಗ ಬಂಧನದಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ