AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ ಅಪ್​ಲೋಡ್​​​ ಮಾಡಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು
ವಿಶ್ವ, ಸುಶ್ಮಾ
TV9 Web
| Edited By: ಆಯೇಷಾ ಬಾನು|

Updated on: Feb 01, 2024 | 2:05 PM

Share

ಮೈಸೂರು, ಫೆ.01: ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯರಗನಹಳ್ಳಿ ದಂಪತಿ ವಿಶ್ವ(34), ಸುಶ್ಮಾ(28) ಆತ್ಮಹತ್ಯೆ ಮಾಡಿಕೊಂಡವರು. ದಂಪತಿ (Couple) ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ (Social Media) ವಿಡಿಯೋ ಅಪ್​ಲೋಡ್​​​ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಮೈಸೂರಿನ ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಮೃತ ವಿಶ್ವ ಅವರು ತಮಗೆ ಪರಿಚಯಸ್ಥನಾಗಿದ್ದ ಶಿವು ಎಂಬುವವನಿಗೆ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಚೋರನಹಳ್ಳಿ ರಾಜಣ್ಣ ಎಂಬುವವರ ಬಳಿ ತಮ್ಮ ಚಿನ್ನಾಭರಣ ಅಡವಿಟ್ಟು, ಕೆಲವರ ಬಳಿ ಸಾಲಕ್ಕೆ ಹಣ ಪಡೆದು ಶಿವುಗೆ ಸಾಲ ಕೊಡಿಸಿ ಸಹಾಯ ಮಾಡಿದ್ದರು. ಆದರೆ ಶಿವು ಸಾಲ ವಾಪಸ್​ ನೀಡದೆ ತಕರಾರು ಮಾಡಿದ್ದ.  ಹಿನ್ನೆಲೆ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸದೆ ಚೋರನಹಳ್ಳಿ ರಾಜಣ್ಣ ವಿಶ್ವ ಅವರ ಚಿನ್ನಾಭರಣ ಹಿಂದಿರುಗಿಸಲು ನಿರಾಕರಿಸಿದ್ದರು. ಇದರಿಂದ ನೊಂದ ವಿಶ್ವ ಸಾಲ ನೀಡಿದ್ದ ರಾಜಣ್ಣ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಾಂತಿಪ್ರಿಯ ಮಂಡ್ಯ ಜನರಿಗೆ ಫೆಬ್ರುವರಿ 9ರ ಬಂದ್ ಬೇಕಿಲ್ಲ, ವಿಪಕ್ಷ ನಾಯಕರು ಶಾಂತಿ ಕದಡುವ ಪ್ರಯತ್ನದಲ್ಲಿದ್ದಾರೆ: ಚಲುವರಾಯಸ್ವಾಮಿ

ಕುಡಿದ ಅಮಲಿನಲ್ಲಿ ಪತ್ನಿ ಕೊಂದ ಪತಿ

ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಿನ್ನೆ ಕೊಲೆಯೊಂದು ನಡೆದಿದೆ. ನಿನ್ನೆ ರಾತ್ರಿ‌ ಕಂಠಪೂರ್ತಿ ಕುಡಿದು ಮನೆಗೆ ಬಂದ ಪತಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಅರ್ಪಿತಾ (24) ಕೊಲೆಯಾದ ಪತ್ನಿ.‌ ಹನುಮಂತ (28) ಕೊಲೆ ಮಾಡಿದ ಆರೋಪಿ ಪತಿ.

ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ ಮಾಡಿದ್ದು ಕಿವಿಯಲ್ಲಿ ರಕ್ತ ಬಂದು ಅರ್ಪಿತಾ ಸಾವನ್ನಪ್ಪಿದ್ದಾರೆ. ಗ್ರಾಮ ದೇವತೆಯ ಜಾತ್ರೆಯ ದಿನ ಘಟನೆ ನಡೆದಿದೆ. ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಾಲಕ ಸಾವು

ಗೂಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಟ್ರ್ಯಾಕ್ಟರ್​ಗೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ಪಟ್ಟಣದ ಎಪಿಎಂಸಿ ಬಳಿ ದುರ್ಘಟನೆ ನಡೆದಿದ್ದು, ರಸ್ತೆಯಲ್ಲಿ ಕಾದಾಡ್ತಿದ್ದ ಗೂಳಿ ವಿದ್ಯಾರ್ಥಿ ನಿಖಿಲ್ ಮೇಲೆ ನುಗ್ಗಿ ಬಂದಿದೆ. ಈ ವೇಳೆ ಗೂಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಾಲಕ ಟ್ರ್ಯಾಕ್ಟರ್ ಕಡೆ ನುಗ್ಗಿದ್ದಾನೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಹರಿದು 14 ವರ್ಷದ ನಿಖಿಲ್ ಕೋಳಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್