AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಸಹೋದರರಿಗೆ ಚಿತ್ರಹಿಂಸೆ ನೀಡಿದ ಕೇರಳದ 4 ಪೊಲೀಸರ ವರ್ಗಾವಣೆ

ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಘಟನೆ ಕೇರಳದ ಕಿಲ್ಲಿಕೋಳೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಸಹೋದರರಿಗೆ ಚಿತ್ರಹಿಂಸೆ ನೀಡಿದ ಕೇರಳದ 4 ಪೊಲೀಸರ ವರ್ಗಾವಣೆ
tortured two brothers in police custody
TV9 Web
| Edited By: |

Updated on:Oct 20, 2022 | 3:33 PM

Share

ಕಿಲ್ಲಿಕೋಳೂರು: ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಘಟನೆ ಕೇರಳದ ಕಿಲ್ಲಿಕೋಳೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಕಸ್ಟಡಿ ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಗಾವಣೆ ಮಾಡಲಾಗಿದೆ. ಆಂತರಿಕ ವಿಚಾರಣೆಯ ಪ್ರಕಾರ, ಪೊಲೀಸ್ ಅಧಿಕಾರಿಗಳು ಇಬ್ಬರು ಸಹೋದರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರಿಂದ ಚಿತ್ರಹಿಂಸೆ  

ಮಾದಕ ದ್ರವ್ಯ ದಂಧೆಯ ಆರೋಪದ ಮೇಲೆ ಜಾಮೀನು ನೀಡಲು ವಿಘ್ನೇಶ್​ನನ್ನು ಠಾಣೆಗೆ ಕರೆಸಿಕೊಂಡ ಕಸ್ಟಡಿ ಚಿತ್ರಹಿಂಸೆ ನೀಡಿರುವ ಘಟನೆ ಆಗಸ್ಟ್ 25ರಂದು ನಡೆದಿದೆ. ಇದು ಮಾದಕ ದ್ರವ್ಯ ದಂಧೆ ಪ್ರಕರಣವಾಗಿರುವುದರಿಂದ ಆರೋಪಿಗೆ ಜಾಮೀನು ನೀಡಬೇಕೆಂಬ ಅವರ ಮನವಿಯನ್ನು ಪೊಲೀಸರು ನಿರಾಕರಿಸಿದ್ದಾರೆ.

ಈ ವೇಳೆ ವಿಘ್ನೇಶ್ ಸಹೋದರ ವಿಷ್ಣು ತನ್ನ ಕಿರಿಯ ಸಹೋದರನನ್ನು ಹುಡುಕಿಕೊಂಡು ಠಾಣೆಗೆ ಬಂದಿದ್ದಾನೆ. ಅವರು ಪೊಲೀಸ್ ಠಾಣೆಗೆ ಬಂದ ನಂತರ, ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಚೌಹಾಣ್ ಅವರು ಸಂಚಾರ ಉಲ್ಲಂಘನೆಯನ್ನು ಉಲ್ಲೇಖಿಸಿ ವಿಷ್ಣು ಅವರೊಂದಿಗೆ ಜಗಳ ಮಾಡಿದ್ದಾರೆ. ಸಹೋದರರ ಪ್ರಕಾರ, ವಿಘ್ನೇಶ್ ಅವರ ಸಹೋದರನ್ನು ಪೊಲೀಸ್ ಠಾಣೆಯೊಳಗೆ ಎಳೆದೊಯ್ದು 1 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ.

ಪೊಲೀಸರು ನೀಡಿದ ಚಿತ್ರಹಿಂಸೆಗೆ ಇಬ್ಬರು ಕೂಡ ತೀವ್ರ ನೋವಿನಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ತಮ್ಮ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದೇ ವೇಳೆ ಆರೋಪಿ ಮಾದಕ ದ್ರವ್ಯ ದಂಧೆಗೆ ಜಾಮೀನು ನೀಡಲು ಆಗಮಿಸಿದ ಸಹೋದರರು ಠಾಣೆಯೊಳಗೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲ್ಲಂ ನಗರ ಪೊಲೀಸ್ ಕಮಿಷನರ್ ಮೆರಿನ್ ಜೋಸೆಫ್ ಇಂದು ಅಕ್ಟೋಬರ್ 20 ರಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಈ ಬಗ್ಗೆ ವರದಿಯನ್ನು ಸಲ್ಲಿಸಲಿದ್ದಾರೆ.

Published On - 3:33 pm, Thu, 20 October 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ