AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ತ್ರಿವಳಿ ಕೊಲೆ; ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಗಂಡ ಪರಾರಿ

ದೆಹಲಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ತನ್ನ ಪತ್ನಿಯಾದ ಜಯಶ್ರೀ, 5 ಮತ್ತು 7 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿದ್ದಾನೆ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ದಂಪತಿಗಳ ನಡುವೆ ಜಗಳ ನಡೆದಿದ್ದು, ನಂತರ ಪ್ರದೀಪ್ ತನ್ನ ಮನೆಯವರನ್ನೆಲ್ಲ ಕೊಲೆ ಮಾಡಿದ್ದಾರೆ.

ದೆಹಲಿಯಲ್ಲಿ ತ್ರಿವಳಿ ಕೊಲೆ; ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಗಂಡ ಪರಾರಿ
Death
ಸುಷ್ಮಾ ಚಕ್ರೆ
|

Updated on: Aug 09, 2025 | 4:39 PM

Share

ನವದೆಹಲಿ, ಆಗಸ್ಟ್ 9: ಇಂದು (ಶನಿವಾರ) ರಾಷ್ಟ್ರ ರಾಜಧಾನಿ ದೆಹಲಿಯ (Delhi Crime) ಕರವಾಲ್ ನಗರದಲ್ಲಿ ಆಘಾತಕಾರಿ ಘಟನೆ (Shocking News) ನಡೆದಿದ್ದು, ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ ಈತ ತನ್ನ ಪತ್ನಿ ಜಯಶ್ರೀ ಮತ್ತು ಐದು ಮತ್ತು ಏಳು ವರ್ಷದ ಪುತ್ರಿಯರನ್ನು ಕೊಂದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ದಂಪತಿಯ ನಡುವೆ ಜಗಳವಾಗಿದ್ದು, ನಂತರ ಪ್ರದೀಪ್ ಈ ಕೊಲೆ ಮಾಡಿದ್ದಾರೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ. ಇದರ ಜೊತೆಗೆ, 3 ಜನರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. “ದೆಹಲಿಯ ಕರವಾಲ್ ನಗರ ಪ್ರದೇಶದಲ್ಲಿ ಪ್ರದೀಪ್ ಎಂಬ ವ್ಯಕ್ತಿ ತನ್ನ ಪತ್ನಿ, 5 ಮತ್ತು 7 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿದ್ದಾರೆ. ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ

ಈ ಘಟನೆಯು ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ಪ, ಅಮ್ಮ ಮತ್ತು ತಂಗಿಯನ್ನು ಕೊಂದಿದ್ದ ತ್ರಿವಳಿ ಕೊಲೆಯ ಕರಾಳ ನೆನಪುಗಳನ್ನು ಮತ್ತೆ ನೆನಪಿಸಿದೆ. ಆ ಕೊಲೆಯ ಆರೋಪಿ 20 ವರ್ಷದ ಅರ್ಜುನ್ ಆಸ್ತಿಯೆಲ್ಲ ತನಗೇ ಸಿಗಬೇಕೆಂದು ತನ್ನ ಪೋಷಕರು ತನ್ನ ತಂಗಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ.

ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ ಮಗಳು ಕವಿತಾ (23) ಎಂಬ ಮೂವರ ಶವಗಳು ಡಿಸೆಂಬರ್‌ನಲ್ಲಿ ಡಿಯೋಲಿ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿತ್ತು. ಮೊದಲು ದರೋಡೆಕೋರರು ಮನೆಯವರನ್ನು ಕೊಲೆ ಮಾಡಿ, ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಎಂದು ಕೇಸ್ ದಾಖಲಾಗಿತ್ತು. ಆದರೆ, ಪೊಲೀಸರ ತನಿಖೆ ವೇಳೆ ಅರ್ಜುನ್ ಮಾಡಿದ್ದ ಕೊಲೆಯ ಸಂಚು ಬೆಳಕಿಗೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ