Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ಕೊಲೆ: ಪ್ರೇಯಸಿ, ಆಕೆಯ ಸಹೋದರಿ, ತಂದೆಯ ಕತ್ತು ಸೀಳಿದ ಹುಚ್ಚು ಪ್ರೇಮಿ, ತಾಯಿ ಬಚಾವ್

ಪ್ರೇಮಿಯೊಬ್ಬ ತನ್ನ ಪ್ರೇಯಸಿ, ಆಕೆಯ ತಂದೆ ಹಾಗೂ ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ರಾತ್ರಿ ತಾರಸಿಯ ಮೇಲೆ ಮಲಗಿದ್ದ ಮೂವರ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ, ಬಳಿಕ ತಪ್ಪಿಸಿಕೊಳ್ಳಲು ಯತ್ನಿಸಿದ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ ಅವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ತ್ರಿವಳಿ ಕೊಲೆ:  ಪ್ರೇಯಸಿ, ಆಕೆಯ ಸಹೋದರಿ, ತಂದೆಯ ಕತ್ತು ಸೀಳಿದ ಹುಚ್ಚು ಪ್ರೇಮಿ, ತಾಯಿ ಬಚಾವ್
ಬಂಧನ
Follow us
ನಯನಾ ರಾಜೀವ್
|

Updated on:Jul 17, 2024 | 9:37 AM

ಬಿಹಾರದಲ್ಲಿ ತ್ರಿವಳಿ ಕೊಲೆ ನಡೆದಿದೆ, ಹುಚ್ಚು ಪ್ರೇಮಿಯೊಬ್ಬ ಪ್ರೇಯಸಿ ಹಾಗೂ ಆಕೆಯ ಸಹೋದರಿ, ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಬಿಹಾರದ ಸರನ್ ಜಿಲ್ಲೆಯಲ್ಲಿ ಘಟನೆ ನಡೆದಿದೆ, 55 ವರ್ಷದ ತಾರಕೇಶ್ವರ್​ ಅವರ ಇಬ್ಬರು ಹೆಣ್ಣುಮಕ್ಕಳಾದ ಚಾಂದಿನಿ ಕುಮಾರಿ ಹಾಗೂ ಅಭಾ ಕುಮಾರಿ ಹಾಗೂ ಪತ್ನಿ ಎಲ್ಲರೂ ಮನೆಯಲ್ಲಿ ಮಲಗಿದ್ದರು.

ಆಗ ಮೂವರ ಕತ್ತು ಸೀಳಿ ಕೊಲೆ ಮಾಡಿದ್ದ ಆರೋಪಿ ತಾರಕೇಶ್ವರ್ ಪತ್ನಿಯನ್ನು ಕೊಲ್ಲಲು ಬಂದಾಗ ಅವರಿಗೆ ಎಚ್ಚರವಾಗಿ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆರೋಪಿ ಪ್ರೇಯಸಿಯ ತಾಯಿಯ ಭುಜದ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಕೊಲೆಯ ಹಿಂದೆ ಪ್ರೇಮ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ತಾರಕೇಶ್ವರ್ ಪತ್ನಿ ಶೋಭಾ ದೇವಿಯ ಹೇಳಿಕೆಯನ್ನು ದಾಖಲಿಸಿದ್ದಾರೆ. ಅನುಮಾನದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಮನೆಯವರೆಲ್ಲರೂ ತಾರಸಿಯ ಮೇಲೆ ಮಲಗಿದ್ದರು, ಇಬ್ಬರು ಆರೋಪಿಗಳು ಬಂದು ಹರಿತವಾದ ಆಯುಧದಿಂದ ಒಬ್ಬರಾದ ಮೇಲೆ ಒಬ್ಬರ ಕತ್ತನ್ನು ಸೀಳಿ ಕೊಲೆ ಮಾಡಿದ್ದಾರೆ.

ಮತ್ತಷ್ಟು ಓದಿ: Shocking News: ಗೆಳೆಯನ ತಾಯಿಯ ಮೇಲೆ ಯುವಕನಿಂದ ಅತ್ಯಾಚಾರ; ಹೇಯ ಕೃತ್ಯ ಬಯಲು

ಬಳಿಕ ಶೋಭಾದೇವಿ ಹತ್ಯೆ ಮಾಡಲು ಯತ್ನಿಸಿದಾಗ ಆಕೆ ಓಡಿಹೋಗಲು ಪ್ರಯತ್ನಿಸಿದಳು ಆಗ ಆಕೆಯ ಮೇಲೂ ಹಲ್ಲೆ ನಡೆಸಿದ್ದಾರೆ. ಆರೋಪಿ ರೊಷನ್ ಹಾಗೂ ಚಾಂದಿನಿ ಆಗಾಗ ಮಾತನಾಡುತ್ತಿದ್ದರು, ಆದರೆ ಕುಟುಂಬದವರ ಮಾತಿನಿಂದಾಗಿ ಅವರಿಬ್ಬರು ಮಾತನಾಡುವುದನ್ನು ನಿಲ್ಲಿಸಿದ್ದರು.

ಆಕೆ ನನ್ನನ್ನು ಮದುವೆಯಾಗದಿದ್ದರೆ ಬೇರೆಯವರನ್ನು ಮದುವೆಯಾಗಲು ನಾನು ಬಿಡುವುದಿಲ್ಲ ಎಂದು ಹೇಳಿ ಸ್ನೇಹಿತನ ಜತೆ ಮನೆಗೆ ಹೋಗಿ ಮೂವರನ್ನು ಹತ್ಯೆ ಮಾಡಿದ್ದ. ಪೊಲೀಸರು ಸುಧಾಂಶು ಅಲಿಯಾಸ್​ ರೋಷನ್​ನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:35 am, Wed, 17 July 24

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!