ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Aug 20, 2023 | 12:38 PM

ಗುವಾಹಟಿ: ವಿವಾಹೇತರ ಸಂಬಂಧ (Extramarital Affair) ಹೊಂದಿದ್ದಾರೆ ಎಂಬ ಆರೋಪದ ಮೇಲೆ ತ್ರಿಪುರಾದಲ್ಲಿ (Tripura) ಶನಿವಾರ ಪುರುಷ ಮತ್ತು ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಪುರುಷನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ 20 ವರ್ಷದವಳಾಗಿದ್ದು, ಆಕೆಯ ಸೋದರ ಸಂಬಂಧಿ ಮತ್ತು ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಾರೆ. ಹಲ್ಲೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಡಿಯೊದಲ್ಲಿ, ವಯಸ್ಸಾದ ಮಹಿಳೆ ಯುವತಿಯಯ ಕೂದಲನ್ನು ಎಳೆದು ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಪುರುಷನನ್ನು ಕೂಡಾ ಅದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿದೆ. ಜನರ ಗುಂಪೊಂದು ದಾಳಿಯನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು, ಆದರೆ ಯಾರೂ ಸಹಾಯ ಮಾಡಲು ಮುಂದೆ ಬರುವುದು ಕಾಣಿಸುತ್ತಿಲ್ಲ.

ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ವಿವಾಹಿತ ವ್ಯಕ್ತಿ ಅದೇ ಪ್ರದೇಶದ 20 ವರ್ಷದ ಯುವತಿಯೊಂದಿಗೆ ಪ್ರಣಯ ಸಂಬಂಧದಲ್ಲಿ ತೊಡಗಿರುವುದು ಕಂಡುಬಂದಿದೆ. ಸ್ಥಳೀಯರು ಶನಿವಾರ ಬೆಳಿಗ್ಗೆ ಅವರನ್ನು ಒಟ್ಟಿಗೆ ಹಿಡಿದು ತಂದು ಸಾರ್ವಜನಿಕವಾಗಿ ವಿಚಾರಣೆ ಮಾಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಸಂತ್ರಸ್ತರನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ

ಗಾಯಗೊಂಡ ಪುರುಷ ಮತ್ತು ಮಹಿಳೆ ಸೇರಿದಂತೆ ಯಾರೊಬ್ಬರೂ ಯಾವುದೇ ಔಪಚಾರಿಕ ದೂರುಗಳನ್ನು ದಾಖಲಿಸಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಯುವತಿಯ ಸೋದರ ಸಂಬಂಧಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಲ್ಲೆ ನಡೆಸಿದವರಲ್ಲಿ ಆಕೆಯ ಅತ್ತಿಗೆಯೂ ಇದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 20 August 23

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್