AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮೇಶ್ವರ್ ತವರು ಕ್ಷೇತ್ರದಲ್ಲಿ ಯೋಧನ ಮೇಲೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ

ಪ್ರತ್ಯೇಕ ಘಟನೆ: ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕನಿಗೆ ಚಾಕುವಿನಿಂದ ಇರಿಯಲಾಗಿದೆ.

ಪರಮೇಶ್ವರ್ ತವರು ಕ್ಷೇತ್ರದಲ್ಲಿ ಯೋಧನ ಮೇಲೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 24, 2024 | 1:19 PM

Share

ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ (Soldier) ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ (Kortagere) ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು.

ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ ಭಾರತೀಯ ಭೂಸೇನೆ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯ ಮೇಲೆ ಊರಿಗೆ ಬಂದಿದ್ದು, ಬೈರೇನಹಳ್ಳಿ ಕ್ರಾಸ್​ಗೆ ಬರುತ್ತಿದ್ದರು. ಈ ವೇಳೆ ದಾರಿ ಮಧ್ಯೆ ನಿಂತಿದ್ದವರಿಗೆ ಯೋಧ ಗೋವಿಂದರಾಜು ಅವರು ದಾರಿ ಬಿಡಿ ಎಂದಿದ್ದಾರೆ.

ಈ ವೇಳೆ ಕುಡಿದ ಮತ್ತಲ್ಲಿ ಐವರು ಮದ್ಯದ ಬಾಟಲಿಯಿಂದ ಯೋಧ ಗೋವಿಂದರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಚಾಲಕನಿಗೆ ಚಾಕು ಇರಿತ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಚಾಲಕನಿಗೆ ಚಾಕುವಿನಿಂದ ಇರಿಯಲಾಗಿದೆ. ಟಾಟಾ ಏಸ್ ಚಾಲಕ ಭಾಸ್ಕರ್ ರೆಡ್ಡಿ ವೇಗವಾಗಿ ಬಂದು ದಾಬಸ್ ಪೇಟೆ ಬಳಿ ಕೊಪ್ಪಳದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​​ ಅನ್ನು ಅಡ್ಡಗಟ್ಟಿದ್ದಾನೆ. ಬಳಿಕ “ನನ್ನನ್ನೇ ಓವರ್ ​ಟೆಕ್” ಮಾಡಿಕೊಂಡು ಬರುತ್ತೀಯಾ ಅಂತ ಕೆಎಸ್​ಆರ್​ಟಿಸಿ ಬಸ್​ ಚಾಲಕ ಶಿವಪ್ಪ ಮಡಿವಾಳರ ಜೊತೆ ಗಲಾಟೆ ಮಾಡಿ, ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ಸಾವು

ಇದರಿಂದ ಗಾಯಗೊಂಡ ಶಿವಪ್ಪ ಮಡಿವಾಳ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಏಸ್​ ಚಾಲಕ ಭಾಸ್ಕರ್ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಸಿಬ್ಬಂದಿಯಿಂದ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಸರಿಯಾದ ಸಮಯಕ್ಕೆ ಬಸ್​ ಹೊರಡದಿದ್ದನ್ನ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಕೆಎಸ್​ಆರ್​ಟಿಸಿ ಸಿಬ್ಬಂದಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ಘಟನೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೆಎಸ್​ಆರ್​ಟಿಸಿ ಬಸ್ ಬೆಂಗಳೂರಿಂದ ತಿರುವಣ್ಣಾಮಲೈಗೆ ಬೆಳಗ್ಗೆ 8.45ಕ್ಕೆ ಹೊರಡಬೇಕಿತ್ತು. 9:30 ಆದರೂ ಬಸ್​ ಹೊರಡಲಿಲ್ಲ. ಇದನ್ನು ಪ್ರಶ್ನೆ ಮಾಡಿದ್ದ ಪ್ರಯಾಣಿಕನ ಮೇಲೆ ಡಿಪೋ ಮ್ಯಾನೇಜರ್, ಸೆಕ್ಯುರಿಟಿ ಸಿಬ್ಬಂದಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಕೆಎಸ್ಆರ್​ಟಿಸಿ ಸ್ಪಷ್ಟನೆ

ಮೇ 22 ರಂದು ಬೆಂಗಳೂರು ಡಿಪೋ-6ರ ಬಸ್ ತಮಿಳುನಾಡಿನ ವಿಳ್ಳುಪುರಂಗೆ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಬೆಳಿಗ್ಗೆ 8.45 ಹೊರಡಬೇಕಾಗಿತ್ತು. ಆದರೆ ಬಸ್​ ಟೈರ್ ಪಂಚರ್ ಆಗಿತ್ತು. ಕೂಡಲೆ ವಾಹನ ದುರಸ್ತಿ ಪಡಿಸಿ ಹೊರಡುವಾಗ ಪ್ರಯಾಣಿಕರು, 9 ಗಂಟೆಗೆ ಘಟಕಕ್ಕೆ ಆಗಮಿಸಿ ಘಟಕದ ಸಿಬ್ಬಂದಿಯವರೊಡನೆ ಮಾತುಕತೆ ನಡೆಸಿದ್ದಾರೆ.

ಈ ಸಂಬಂಧ ಪ್ರಯಾಣಿಕರನ್ನು ಅದೇ ದಿನ ಸಂಪರ್ಕಿಸಿ, ನಡೆದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದೇವೆ. ಘಟಕದ ಸಿಬ್ಬಂದಿ ಮೇಲೆ ಕ್ರಮವಹಿಸಲಾಗಿರುತ್ತದೆ. ಪ್ರಯಾಣಿಕನ ಮೇಲೆ ಕೆಎಸ್​ಆರ್​ಟಿಸಿ ಸೆಕ್ಯುರಿಟಿಗಳು ಹಲ್ಲೆ ಮಾಡಿಲ್ಲ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಕೆಎಸ್​ಆರ್​ಟಿಸಿ ಸಿಬ್ಬಂದಿ ಸಿಸಿಟಿವಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್