AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು ಜಿಲ್ಲೆಯ ತಿಪಟೂರು ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರ ಪ್ರಕರಣವೊಂದು ನಡೆದಿದೆ. ಹೌದು 13 ವರ್ಷದ ಮಗಳ ಮೇಲೆ ಹೆತ್ತ ತಂದೆಯೇ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಪಾಪಿ ತಂದೆ ಈ ಹಿಂದೆಯೂ ಮಗಳ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದನು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ತುಮಕೂರಿನಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
ತಿಪಟೂರು ಪೊಲೀಸ್​ ಠಾಣೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 12, 2024 | 1:15 PM

Share

ತುಮಕೂರು, ಮೇ 12: ಅಪ್ರಾಪ್ತೆ ಮಗಳ (Daughter) ಮೇಲೆಯೇ ತಂದೆ (Father) ಅತ್ಯಾಚಾರವೆಸಗಿರುವ ಘಟನೆ ತಿಪಟೂರು (Tiptur) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬಾಲಕಿ ತಾಯಿ ತಿಪಟೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್​ ದಾಖಲಾಗಿದೆ. ತಂದೆ ಮಗಳ ಮೇಲೆ ಈ ಹಿಂದೆಯೂ ಅತ್ಯಾಚಾರಕ್ಕೆ ಯತ್ನಿಸಿದ್ದನು. ಆರೋಪಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

ತುಮಕೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಶಿಕ್ಷಕರ ಸ್ಥಿತಿ ಗಂಭೀರವಾಗಿದೆ. ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಪಾವಗಡ ಸರ್ಕಾರಿ ಪ್ರೌಢಶಾಲೆ ಪ್ರಾಂಶುಪಾಲ ಧನಂಜಯ (58), ಗೌಡೇಟಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣ (49) ಮೃತ ದುರ್ದೈವಿಗಳು.

ಶಿಕ್ಷಕರಾದ ನರಸಿಂಹ, ವೆಂಕಟಾಚಲಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್​ ಆಗುವಾಗ ಅಪಘಾತ ಸಂಭವಿಸಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Video Viral:ಬೆಲ್ಟ್‌ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ, ಬೀದಿಯಲ್ಲೇ ಅತ್ಯಾಚಾರವೆಸಗಿ ಪರಾರಿಯಾದ ವ್ಯಕ್ತಿ

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ನೆಲಮಂಗಲ: ಎಂಟು ವರ್ಷದ ಬಾಲಕಿ ಮೇಲೆ ಮನೆಯ ಮಾಲಿಕ ಅತ್ಯಾಚಾರ ಎಸಗಿದ್ದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಹರೀಶ್ (35) ಅತ್ಯಾಚಾರವೆಸಗಿದ ಆರೋಪಿ. ಬಾಲಕಿಯನ್ನು ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪೋಷಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಾಲಕಿ ಪೋಷಕರು ಆರೋಪಿ ಹರೀಶ್ ಮನೆಯಲ್ಲಿ ಬಾಡಿಗೆಗೆ ವಾಸವಾಗಿತ್ತು. ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದ್ದಾಗ ಆರೋಪಿ ಹರೀಶ್​ ಅತ್ಯಾಚಾರವೆಸಗಿದ್ದನು. ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯನ್ನ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು.

ಪತ್ನಿಯನ್ನ ಹತ್ಯೆಗೈದ ಪತಿ

ರಾಮನಗರ: ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪತಿ ರಾಜೇಶ್ ಕೊಲೆ ಮಾಡಿರುವ ಆರೋಪಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ