ತುಮಕೂರು: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಸ್ಥಳೀಯರಿಂದ ಬಾಲಕಿಯ ರಕ್ಷಣೆ
ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿಯನ್ನು ಎಳೆದೊಯ್ದು 23 ವರ್ಷದ ಯುವಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು, ಜನವರಿ 30: ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ (girl) ಯನ್ನು ಎಳೆದೊಯ್ದು 23 ವರ್ಷದ ಯುವಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಡೊಂದರಲ್ಲಿ ಬಾಲಕಿ ನೇಣಿಗೆ ಶರಣು
ಶಿವಮೊಗ್ಗ: 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಕಾಡೊಂದರಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಸವಾನಿ ಬಳಿ ನಡೆದಿದೆ. ಪ್ರೀತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಸವಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶುಂಠಿಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಓದುತ್ತಿದ್ದಳು.
ಇದನ್ನೂ ಓದಿ: ಬೆಂಗಳೂರು: 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ, ಸಿಸಿಬಿ ಪೊಲೀಸರಿಂದ 7 ಪೆಡ್ಲರ್ಗಳ ಬಂಧನ
ಶಾಲೆಗೆ ಯಾಕೆ ಹೋಗಲ್ಲ ಎಂದು ಪೋಷಕರು ಕಾರಣ ಕೇಳಿದ್ದಾರೆ. ಇದಾದ ಬಳಿಕ ಯಾವುದೇ ಮಾಹಿತಿ ನೀಡದೆ ಬಸವಾನಿ ಬಳಿಯ ಕಾಡಿನ ಮರದಲ್ಲಿ ನೇಣಿಗೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 15 ದಿನದಿಂದ ಪ್ರೀತಿ ಶಾಲೆಗೆ ಬರದ ವಿಷಯವನ್ನು ಶಿಕ್ಷಕರು ತಿಳಿಸಿದ್ದಾರೆ. ಸದ್ಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಿವಿ 9 ವರದಿ ಫಲಶೃತಿ: ಮುತ್ತಪ್ಪ ಸಾವು, ಐದು ಲಕ್ಷ ರೂ. ಪರಿಹಾರ ಚೆಕ್ ವಿತರಣೆ
ಶಿವಮೊಗ್ಗದಲ್ಲಿ ನಿನ್ನೆ ಚರಂಡಿ ಸಿಮೆಂಟ್ ಸ್ಲ್ಯಾಬ್ ಕುಸಿದು ಬಿದ್ದು ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಎನ್ನುವವರು ಮೃತಪಟ್ಟಿದ್ದರು. ಮುತ್ತಪ್ಪ ಸಾವಿನ ಕುರಿತು ಟಿವಿ9 ನಿರಂತರ ವರದಿ ಮಾಡಿತ್ತು. ವರದಿಯ ಫಲಶೃತಿಯಿಂದ ಇದೀಗ ಶಿವಮೊಗ್ಗ ರೇಲ್ವೆ ಇಲಾಖೆಯ ಅಧಿಕಾರಿಗಳಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು: ವರ್ಕ್ ಫ್ರಂ ಹೋಂ ಕೆಲಸ ನೀಡೋದಾಗಿ ಸಾವಿರಾರು ಜನರನ್ನು ನಂಬಿಸಿ 158 ಕೋಟಿ ವಂಚನೆ ಮಾಡಿದ್ದ ದೊಡ್ಡ ಗ್ಯಾಂಗ್ ಅರೆಸ್ಟ್
ಮೂರು ಮಕ್ಕಳನ್ನು ಹೊಂದಿದ್ದ ಮೃತ ಮುತ್ತಪ್ಪ, ನಿನ್ನೆಯಿಂದ ಕುಟುಂಬ ಕಣ್ಣೀರು ಹಾಕುತ್ತಿದ್ದರು. ಇಂದು ಐದು ಲಕ್ಷ ಚೆಕ್ ಪರಿಹಾರ ಸಿಕ್ಕ ಹಿನ್ನಲೆ ಟಿವಿ9 ಗೆ ಮೃತನ ಪತ್ನಿ ಲತಾ ಧನ್ಯವಾದ ತಿಳಿಸಿದ್ದಾರೆ.
ಮೃತ ಮುತ್ತಪ್ಪನ ಸಂಬಂಧಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದು, ಟಿವಿ 9 ನಿರಂತರ ವರದಿಯಿಂದ ದೊಡ್ಡ ಸಮಸ್ಯೆಗೆ ನಮಗೆ ಪರಿಹಾರ ಸಿಕ್ಕಿದೆ. ಟಿವಿ 9 ವರದಿ ಮಾಡದೇ ಇದ್ದರೆ ಪರಿಹಾರ ಸಿಗುತ್ತಿರಲಿಲ್ಲ. ಇನ್ನು ಮುಂದೆ ಏನಾದರೂ ಬಡ ಕುಟುಂಬಕ್ಕೆ ಸಹಾಯ ಆಗಬೇಕಾದರೆ ಅದು ಟಿವಿ 9 ನಿಂದ ಮಾತ್ರ ಸಾಧ್ಯ ಎಮದು ಹೇಳಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.