AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು

ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ಮೃತದೇಹಗಳು ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು
ಅಪಘಾತ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jan 06, 2024 | 11:03 PM

Share

ತುಮಕೂರು, ಜನವರಿ 06: ಕಾರು ಡಿಕ್ಕಿಯಾಗಿ (collision) ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಮೃತರು. ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ.  ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೃತದೇಹಗಳು ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರೌಡಿಶೀಟರ್​ ಮೇಲೆ ಪೊಲೀಸರ ಫೈರಿಂಗ್

ತುಮಕೂರಲ್ಲಿ ರೌಡಿಶೀಟರ್​ ಮನೋಜ್ ಅಲಿಯಾಸ್ ಮಂಡೇಲಾ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಒಕ್ಕೋಡಿ ಬಳಿ ಘಟನೆ ನಡೆದಿದೆ. ಬೆಳಗ್ಗೆ ಬಂಡೆ ನಾಗನ ಮೇಲೆ ಕೊಲೆಗೆ ಯತ್ನಿಸಿದ್ದ ರೌಡಿ, ತಪ್ಪಿಸಿಕೊಂಡು ಜೀವ ಉಳಿಕೊಂಡಿದ್ದ ಬಂಡೆನಾಗ. ಕೊಲೆ ಯತ್ನದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದ. ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: 2 ಸರ್ಕಾರಿ ಬಸ್‌ಗಳ ಮಧ್ಯೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಪೊಲೀಸರು ಮನೋಜ್​ಗಾಗಿ ಹುಡುಕಾಟ ನಡೆಸಿದ್ದರು. ಒಕ್ಕೋಡಿಯಲ್ಲಿ ತಲೆ ಮರೆಸಿಕೊಂಡಿರುವುದಾಗಿ ಮಾಹಿತಿ ಹಿನ್ನೆಲೆ ಮನೋಜ್​ ಬಂಧನಕ್ಕೆ ತೆರಳಿದ್ದ ವೇಳೆ ಹೆಡ್​ ಕಾನ್ಸ್​ಟೇಬಲ್ ಮೇಲೆ ರೌಡಿ ಮಚ್ಚು ಬೀಸಿದ್ದಾನೆ. ಆತ್ಮರಕ್ಷಣೆಗಾಗಿ ತುಮಕೂರು ಸಿಪಿಐ ದಿನೇಶ್ ಕುಮಾರ್​ರಿಂದ ಪೈರಿಂಗ್ ಮಾಡಲಾಗಿದೆ. ಮನೋಜ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೈಕ್​ಗಳ ಮಧ್ಯೆ ಸರಣಿ ಅಪಘಾತ: ಆಸ್ಪತ್ರೆಗೆ ಸೇರಿಸಿದ ಸಚಿವ ಸಂತೋಷ ಲಾಡ್

ಧಾರವಾಡ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರನ್ನ ಆಸ್ಪತ್ರೆಗೆ ದಾಖಲಿಸಿ ಸಚಿವ ಸಂತೋಷ್ ಲಾಡ್ ಮಾನವೀಯತೆ ಮೆರೆದಿದ್ದಾರೆ. ನಗರದ ಹೊರವಲಯದ ಕೆಲಗೇರಿ ರೈಲ್ವೆ ಕ್ರಾಸಿಂಗ್ ಬಳಿ ಸರಣಿ ಬೈಕ್​ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿದ್ದರು. ಇದೇ ವೇಳೆ ಅಳ್ನಾವರದಿಂದ ಧಾರವಾಡದತ್ತ ಬರುತ್ತಿದ್ದಾಗ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Sat, 6 January 24

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ