ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
ಸಿಎಂ ಭಾಷಣದ ಮಾತು ತಿರುಚಿ ಜಾಲತಾಣದಲ್ಲಿ ವೈರಲ್; ಕಿಡಿಗೇಡಿಗಳ ವಿರುದ್ಧ ದೂರು ದಾಖಲು
Follow us
TV9 Web
| Updated By: Rakesh Nayak Manchi

Updated on: Dec 09, 2022 | 2:18 PM

ತುಮಕೂರು: ಜನಸಂಕಲ್ಪ ಯಾತ್ರೆ (BJP Janasankalpa Yatra)ಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ಬಿಜೆಪಿ (Korategere BJP) ಮಂಡಲ ಅಧ್ಯಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ‘ಸಾರ್ವಜನಿಕ ಸೇವಾ ಬಳಗ’ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.‌ಜಿ.ಪರಮೇಶ್ವರ್ (Dr.G.Parameshwar) ಕೊರಟಗೆರೆ ಎಂಬ ಫೇಸ್​ಬುಕ್ ಪೇಜ್​ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಿಎಂ ಬೊಮ್ಮಾಯಿ ಅವರು ಭಾಷಣದ ವೇಳೆ, ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್​ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ‘ಪರಮೇಶ್ವರ್​ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ’ ಎಂದು ಹೇಳಿರುವುದಾಗಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪವನ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇಸ್ ನಡೆಸಲ್ಲಾ ಎಂದಿದ್ದಕ್ಕೆ ವಕೀಲನ ಮೇಲೆ ಹಲ್ಲೆ ಅರೋಪ: ಪ್ರಕರಣ ದಾಖಲು

ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರನ್ನು ರೌಡಿಗಳೆಂದು ವಿಡಿಯೋದಲ್ಲಿ ನಿಂದಿಸಿದ ಗಂಭೀರ ಆರೋಪದ ಮೇಲೆ ಕಾಂಗ್ರೇಸ್ ಕಳ್ಳೆಕಾಯಿ ಫೇಸ್ ಬುಕ್ ಖಾತೆ ವಿರುದ್ಧ ಕಾಂಗ್ರೇಸ್ ಮುಖಂಡ ಮನೋಹರ್ ನೇತೃತ್ವದ ತಂಡದಿಂದ ದೂರು ನೀಡಲಾಗಿದೆ. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ದೂರು ನೀಡದ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಬಿಜೆಪಿಯವರೇ ಈ ಖಾತೆ ಮೂಲಕ ಕುತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ಸಿಸಿಬಿ ಅಧಿಕಾರಿಗಳು ರೌಡಿಗಳ ಮನೆ ದಾಳಿ ನಡೆಸಿದ್ದರು. ಯಾರು ತಲೆ‌ಮರೆಸಿಕೊಂಡಿದ್ದಾರೆ ಅಂತ ಹೇಳಿದ್ದಾರೆ, ಅವರು ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಬಿಜೆಪಿ ಮೇಲೆ ಬಂದಿರುವ ರೌಡಿ ಪಟ್ಟದ ಆರೋಪವನ್ನ ಕಾಂಗ್ರೆಸ್ ಮೇಲೆ ಆರೋಪ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದೇವೆ. ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ವಿಭಾಗ ಡಿಸಿಪಿಗೆ ಸೂಚಿಸಿದ್ದಾರೆ. ಬಿಜೆಪಿಯವರೇ ಈ ಖಾತೆಗಳ ಮೂಲಕ ಕುತಂತ್ರ ಮಾಡಿದ್ದಾರೆ. ಬಿಜೆಪಿಗೆ ನೇರವಾಗಿ ನಿಂತು ಗೆಲ್ಲುವ ಗಂಡುಸ್ಥನ ಇಲ್ಲ. ಕಾಂಗ್ರೆಸ್ ವಿರುದ್ದ ಸುಳ್ಳು ಆರೋಪ ಮಾಡಿದವರ ವಿರುದ್ಧ ಕ್ರಮ ಆಗಬೇಕು ಎಂದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ