AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ.

ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು
ಮೃತರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Feb 26, 2024 | 4:12 PM

Share

ತುಮಕೂರು, ಫೆಬ್ರವರಿ 26: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್​ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್​ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ.

ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ. 24 ರಂದು ಮೃತಪಟ್ಟಿದ್ದರು.

ಇದನ್ನೂ ಓದಿ: ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಣದ ಆಸೆ ತೋರಿಸಿ ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು; ಖದೀಮರ ಬಂಧನಕ್ಕೆ ಸ್ಥಳೀಯರ ಒತ್ತಾಯ

ಈ ಮೃತ ಮೂವರು ಫೆ. 22ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಮೃತ ಅಂಜಲಿ ಭಾವಚಿತ್ರ ಹಿಡಿದು ಕುಟುಂಬಸ್ಥರು ಪಾವಗಡದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರ್ಛೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಕೋಲಾರ: ಮೂರ್ಛೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಕುವೆಂಪು ನಗರದ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆಗೆ ಎಂದು ದಾಖಲಾಗಿದ್ದ ಒಂದೂವರೆ ವರ್ಷದ ವಿಹಾನ್ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ವಂಶೋದಯ ಆಸ್ಪತ್ರೆ ಮುಂದೆ ಮಗುವಿನ ಸಂಬಂಧಿಕರು ಪ್ರತಿಭಟನೆ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ಕೋಲಾರ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ