ತುಮಕೂರು, ಫೆಬ್ರವರಿ 26: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್ ಮಾಡಿದ್ದರು. ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ.
ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ. 24 ರಂದು ಮೃತಪಟ್ಟಿದ್ದರು.
ಇದನ್ನೂ ಓದಿ: ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ಯುವಕನ ಕೊಲೆ; ಠಾಣೆ ಮುಂದೆ ಶವ ಇಟ್ಟು ಸಿದ್ಧಿ ಸಮುದಾಯದಿಂದ ಪ್ರತಿಭಟನೆ
ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು. ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಹಣದ ಆಸೆ ತೋರಿಸಿ ಮಕ್ಕಳಿಂದ ಮೊಬೈಲ್ ಕಳ್ಳತನ ಮಾಡಿಸುತ್ತಿರುವ ಗುಂಪು; ಖದೀಮರ ಬಂಧನಕ್ಕೆ ಸ್ಥಳೀಯರ ಒತ್ತಾಯ
ಈ ಮೃತ ಮೂವರು ಫೆ. 22ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಮೃತ ಅಂಜಲಿ ಭಾವಚಿತ್ರ ಹಿಡಿದು ಕುಟುಂಬಸ್ಥರು ಪಾವಗಡದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: ಮೂರ್ಛೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ಕುವೆಂಪು ನಗರದ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆಗೆ ಎಂದು ದಾಖಲಾಗಿದ್ದ ಒಂದೂವರೆ ವರ್ಷದ ವಿಹಾನ್ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ವಂಶೋದಯ ಆಸ್ಪತ್ರೆ ಮುಂದೆ ಮಗುವಿನ ಸಂಬಂಧಿಕರು ಪ್ರತಿಭಟನೆ ಮಾಡಿದ್ದು, ಖಾಸಗಿ ಆಸ್ಪತ್ರೆಗೆ ಕೋಲಾರ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.