Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪ್ರಾಣ ಬಿಟ್ಟಿದ್ದಾನೆ. ಮೃತರು ಉತ್ತರ ಕರ್ನಾಟಕ ಮೂಲದವರು ಎಂದು ತಿಳಿದು ಬಂದಿದೆ.

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ, ಇಬ್ಬರು ಸಾವು
ಪ್ರಾತಿನಿಧಿಕ ಚಿತ್ರ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Feb 15, 2024 | 7:20 AM

ತುಮಕೂರು, ಫೆ.15: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿಯಾಗಿದ್ದು (Accident) ಇಬ್ಬರು ಮೃತಪಟ್ಟ ಘಟನೆ ತುಮಕೂರು (Tumkur) ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ಸಂಭವಿಸಿದೆ. ಪ್ರಭುಗೌಡ(28) ಹಾಗೂ ಆನಂದ್(30) ಮೃತ ದುರ್ದೈವಿಗಳು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಉತ್ತರ ಕರ್ನಾಟಕ ಮೂಲದವರು ಎನ್ನಲಾಗಿದೆ. ಪ್ರಭುಗೌಡ ಸ್ಥಳದಲ್ಲೇ ಮೃತಪಟ್ಟಿದ್ದು ಆನಂದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಟಿಪ್ಪರ್ ಡಿಕ್ಕಿ; ತಾಯಿ ಸಾವು, ಮಗನಿಗೆ ಗಾಯ

ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗ ಗಾಯಗೊಂಡಿದ್ದಾನೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ಘಟನೆ ನಡೆದಿದ್ದು, 45 ವರ್ಷದ ಮಂಜುಳಮ್ಮ ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಪುತ್ರ ಮನೋಜ್‌ ಆಸ್ಪತ್ರೆ ಸೇರಿದ್ದಾನೆ. ಇವರಿಬ್ಬರು ಮಾಳೆಕೊಪ್ಪಲು ಗ್ರಾಮದ ನಿವಾಸಿಗಳು. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್​​, ಬೈಕ್ ಮಧ್ಯೆ ಅಪಘಾತ, ಯುವಕ ಸಾವು

ಟಿಪ್ಪರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊಸಟ್ಟಿ‌ ಕ್ರಾಸ್ ಬಳಿ ಘಟನೆ ನಡೆದಿದ್ದು, ಪಿ.ಕೆ.ನಾಗನೂರ ನಿವಾಸಿಯಾದ ದರ್ಶನ್ ಕಾಂಬಳೆ, ನಿನ್ನೆ ಜತ್ತ ರಸ್ತೆಯ ಹೊಸಟ್ಟಿ ಕ್ರಾಸ್​​​​ನಿಂದ ಬೈಕ್​​​​ನಲ್ಲಿ ಬರುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ವಿಷ್ಯ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಇದನ್ನೂ ಓದಿ:ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR

ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ, ಚಾಲಕ ಎಸ್ಕೇಪ್

ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ, ಕಾರು ಚಾಲಕ ಗಾಯಗೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದ್ದು, ಕಾರುಯ ಚಾಲಕ ಗಾಯಗೊಂಡಿದ್ದು, ಉಳಿದ ಮೂವರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಲಾರಿ ನಿಲ್ಲಿಸಿ ಡ್ರೈವರ್ ಎಸ್ಕೇಪ್ ಆಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ