ಅತಿಥಿ ಶಿಕ್ಷಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯ ಕೊಲೆಗೆ ಮಗಳಿಂದಲೇ ಸುಪಾರಿ!

ತುಮಕೂರು ಜಿಲ್ಲೆಯ ಕುಳಿನಂಜಯ್ಯನ ಪಾಳ್ಯದಲ್ಲಿ ಅತಿಥಿ ಶಿಕ್ಷಕ ಮರಿಯಪ್ಪ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ತನಿಖೆ ನಡೆಸಿದಾಗ ಕೊಲೆಯಾದ ಮರಿಯಪ್ಪ ಅವರ ಪತ್ನಿ ಹಾಗೂ ಮಗಳೇ ಕೊಲೆಗೆ ಸುಪಾರಿಕೊಟ್ಟಿರುವ ವಿಚಾರ ಬಹಿರಂಗವಾಗಿದೆ.

ಅತಿಥಿ ಶಿಕ್ಷಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯ ಕೊಲೆಗೆ ಮಗಳಿಂದಲೇ ಸುಪಾರಿ!
ತುಮಕೂರಿನಲ್ಲಿ ನಡೆದ ಅತಿಥಿ ಶಿಕ್ಷಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಂದೆಯ ಕೊಲೆಗೆ ಮಗಳಿಂದಲೇ ಸುಪಾರಿ!
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Feb 13, 2024 | 6:32 PM

ತುಮಕೂರು, ಫೆ.13: ಜಿಲ್ಲೆಯ (Tumkur) ಕುಳಿನಂಜಯ್ಯನ ಪಾಳ್ಯದಲ್ಲಿ ನಡೆದ ಅತಿಥಿ ಶಿಕ್ಷಕ ಮರಿಯಪ್ಪ ಅವರನ್ನು ಬರ್ಬರ ಕೊಲೆ (Murder) ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಪೊಲೀಸರಿಗೆ ಮರಿಯಪ್ಪ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದೇ ಪತ್ನಿ ಹಾಗೂ ಮಗಳು ಎನ್ನುವ ವಿಚಾರ ತಿಳಿದುಬಂದಿದೆ.

ಕುಳಿನಂಜಯ್ಯನ ಪಾಳ್ಯದ ನಿವಾಸಿ ಶಾಂತಕುಮಾರ್‌ ಎಂಬಾತನ್ನನು ಮರಿಯಪ್ಪ ಅವರ ಮಗಳು ಹೇಮಲತಾ ಪ್ರೀತಿಸುತ್ತಿದ್ದಳು. ಇದಕ್ಕೆ ಮರಿಯಪ್ಪ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಶಾಂತಕುಮಾರ್​ ಮರಿಯಪ್ಪ ಮೇಲೆ ದ್ವೇಷ ಬೆಳೆದಿದೆ. ಅದರಂತೆ ಸ್ನೇಹಿತರ ಜೊತೆಗೂಡಿ ಮರಿಯಪ್ಪ ಕೊಲೆಗೆ ಸಂಚು ರೂಪಿಸಿದ್ದ. ಈ ಸಂಚಿನ ಹಿಂದೆ ಮರಿಯಪ್ಪ ಅವರ ಮಗಳು ಹೇಮಲತಾ ಹಾಗೂ ಪತ್ನಿ ಶೋಭಾ ಕೈಜೋಡಿಸಿದ್ದರು.

ಶಾಂತಕುಮಾರ್ ಸ್ನೇಹಿತ‌ರಾದ ಬೆಂಗಳೂರಿನಲ್ಲಿ ವಾಸವಿದ್ದ ಸಂತು, ಹೇಮಂತ್​ಗೆ ಕೊಲೆ ಸುಫಾರಿ ನೀಡಿದ್ದನು. ಹೇಮಂತ್ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂರು ಬಾಲಕರನ್ನು ಬಳಸಿಕೊಂಡು ಫೆಬ್ರವರಿ 10 ರಂದು ಕೊಲೆ ಮಾಡಿದ್ದನು. ಕೊಲೆಗೂ ಮುನ್ನ ಮರಿಯಪ್ಪನ ಚಲನ ವಲನಗಳ ಬಗ್ಗೆ ಪತ್ನಿ-ಮಗಳು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮರಿಯಪ್ಪ ಅಮವಾಸ್ಯೆ ಪೂಜೆ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದ ಮಾಹಿತಿಯನ್ನು ಶಾಂತಕುಮಾರ್​ಗೆ ಹೇಳಿದ್ದರು. ಅದರಂತೆ ಗ್ರಾಮದ ಬಳಿ ಬರುವ ಸಂದರ್ಭದಲ್ಲಿ ಬೈಕ್ ಅಡ್ಡಗಟ್ಟಿ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದಿದ್ದರು. ಗಾಬರಿಗೊಂಡ ಮರಿಯಪ್ಪ ಬೈಕ್​ನಿಂದ ಕೆಳಗಿಳಿದು ಓಡಿ ಹೋಗಿದ್ದಾರೆ. ಈ ವೇಳೆ ಅಟ್ಟಾಡಿಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ‌ಕೊಲೆ ಮಾಡಿದ್ದರು.

ತಂದೆಯ ಕೊಲೆ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸುವಂತೆ ಮಗಳು ಹೇಮಲತಾ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಲತಾಳ ಮೇಲೆ ಅನುಮಾನ ವ್ಯಕ್ತವಾಗಿದೆ. ಅದರಂತೆ, ಹೇಮಲತಾ ಪ್ರೇಮ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದಾಗ ಕೊಲೆ ಪ್ರಕರಣ ಬಯಲಾಗಿದೆ. ಪ್ರಕರಣ ಸಂಬಂಧ ಶಾಂತಕುಮಾರ್, ಸಂತು, ಹೇಮಂತ್, ಶೋಭಾ, ಹೇಮಲತಾ ಹಾಗೂ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್