ತುಮಕೂರು, ಫೆ.13: ಜಿಲ್ಲೆಯ (Tumkur) ಕುಳಿನಂಜಯ್ಯನ ಪಾಳ್ಯದಲ್ಲಿ ನಡೆದ ಅತಿಥಿ ಶಿಕ್ಷಕ ಮರಿಯಪ್ಪ ಅವರನ್ನು ಬರ್ಬರ ಕೊಲೆ (Murder) ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಪೊಲೀಸರಿಗೆ ಮರಿಯಪ್ಪ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದೇ ಪತ್ನಿ ಹಾಗೂ ಮಗಳು ಎನ್ನುವ ವಿಚಾರ ತಿಳಿದುಬಂದಿದೆ.
ಕುಳಿನಂಜಯ್ಯನ ಪಾಳ್ಯದ ನಿವಾಸಿ ಶಾಂತಕುಮಾರ್ ಎಂಬಾತನ್ನನು ಮರಿಯಪ್ಪ ಅವರ ಮಗಳು ಹೇಮಲತಾ ಪ್ರೀತಿಸುತ್ತಿದ್ದಳು. ಇದಕ್ಕೆ ಮರಿಯಪ್ಪ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಶಾಂತಕುಮಾರ್ ಮರಿಯಪ್ಪ ಮೇಲೆ ದ್ವೇಷ ಬೆಳೆದಿದೆ. ಅದರಂತೆ ಸ್ನೇಹಿತರ ಜೊತೆಗೂಡಿ ಮರಿಯಪ್ಪ ಕೊಲೆಗೆ ಸಂಚು ರೂಪಿಸಿದ್ದ. ಈ ಸಂಚಿನ ಹಿಂದೆ ಮರಿಯಪ್ಪ ಅವರ ಮಗಳು ಹೇಮಲತಾ ಹಾಗೂ ಪತ್ನಿ ಶೋಭಾ ಕೈಜೋಡಿಸಿದ್ದರು.
ಶಾಂತಕುಮಾರ್ ಸ್ನೇಹಿತರಾದ ಬೆಂಗಳೂರಿನಲ್ಲಿ ವಾಸವಿದ್ದ ಸಂತು, ಹೇಮಂತ್ಗೆ ಕೊಲೆ ಸುಫಾರಿ ನೀಡಿದ್ದನು. ಹೇಮಂತ್ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂರು ಬಾಲಕರನ್ನು ಬಳಸಿಕೊಂಡು ಫೆಬ್ರವರಿ 10 ರಂದು ಕೊಲೆ ಮಾಡಿದ್ದನು. ಕೊಲೆಗೂ ಮುನ್ನ ಮರಿಯಪ್ಪನ ಚಲನ ವಲನಗಳ ಬಗ್ಗೆ ಪತ್ನಿ-ಮಗಳು ಮಾಹಿತಿ ನೀಡಿದ್ದರು.
ಇದನ್ನೂ ಓದಿ: ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮರಿಯಪ್ಪ ಅಮವಾಸ್ಯೆ ಪೂಜೆ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದ ಮಾಹಿತಿಯನ್ನು ಶಾಂತಕುಮಾರ್ಗೆ ಹೇಳಿದ್ದರು. ಅದರಂತೆ ಗ್ರಾಮದ ಬಳಿ ಬರುವ ಸಂದರ್ಭದಲ್ಲಿ ಬೈಕ್ ಅಡ್ಡಗಟ್ಟಿ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದಿದ್ದರು. ಗಾಬರಿಗೊಂಡ ಮರಿಯಪ್ಪ ಬೈಕ್ನಿಂದ ಕೆಳಗಿಳಿದು ಓಡಿ ಹೋಗಿದ್ದಾರೆ. ಈ ವೇಳೆ ಅಟ್ಟಾಡಿಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿದ್ದರು.
ತಂದೆಯ ಕೊಲೆ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸುವಂತೆ ಮಗಳು ಹೇಮಲತಾ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಲತಾಳ ಮೇಲೆ ಅನುಮಾನ ವ್ಯಕ್ತವಾಗಿದೆ. ಅದರಂತೆ, ಹೇಮಲತಾ ಪ್ರೇಮ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದ್ದಾಗ ಕೊಲೆ ಪ್ರಕರಣ ಬಯಲಾಗಿದೆ. ಪ್ರಕರಣ ಸಂಬಂಧ ಶಾಂತಕುಮಾರ್, ಸಂತು, ಹೇಮಂತ್, ಶೋಭಾ, ಹೇಮಲತಾ ಹಾಗೂ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ